ನವದೆಹಲಿ: ಪರಿಷ್ಕೃತ ಮಾನದಂಡಗಳ ಪ್ರಕಾರ, ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಪದಕ ಗೆದ್ದವರು ಈsಗ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗುತ್ತಾರೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ತಿಳಿಸಿದ್ದಾರೆ.
ಮೋದಿ ಅವರ ಕನಸಾದ ಪರಿಣಾಮಕಾರಿ ಕ್ರೀಡಾ ವಾತಾವರಣ ನಿರ್ಮಿಸಲು, ಬೇರುಮಟ್ಟದಲ್ಲಿ ಪ್ರತಿಭೆಗಳನ್ನು ಬೆಳೆಸಲು ಮತ್ತು ವೃತ್ತಿಯನ್ನಾಗಿ ಹೊಂದಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದ ಜೊತೆ ಸಮಾಲೋಚನೆ ನಡೆಸಿದ್ದು,
ಸರ್ಕಾರಿ ಹುದ್ದೆಗೆ ಸೇರಬಯಸುವ ಕ್ರೀಡಾಪಟುಗಳಿಗೆ ಮಾನದಂಡವನ್ನು ಪರಿಷ್ಕರಿಸಲಾಗಿದೆ ಎಂದು ಅವರು ಜಾಲತಾಣ ಎಕ್ಸ್ನಲ್ಲಿ ತಿಳಿಸಿದ್ದಾರೆ. ತಳಮಟ್ಟದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸುವ ಮೋದಿ ಸರ್ಕಾರದ ಉಪಕ್ರಮವಾಗಿ 2018ರಲ್ಲಿ ಮೊದಲ ಬಾರಿ ಖೇಲೊ ಇಂಡಿಯಾ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಖೇಲೊ ಇಂಡಿಯಾ ಚಳಿಗಾಲದ ಕ್ರೀಡೆ, ಖೇಲೊ ಇಂಡಿಯಾ ಪ್ಯಾರಾ ಗೇಮ್ಸ್ ಮತ್ತು ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ನಲ್ಲಿ ಪದಕ ಗೆದ್ದ 18 ವರ್ಷ ಮೇಲ್ಪಟ್ಟವರು ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.