ಹಾಸನ: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು ದುರುಳರು ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ.
15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ. ಮದುವೆ ಒಪ್ಪದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅರ್ಪಿತಾ ಅವರನ್ನು ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ನಿಮ್ಮ ಮಗಳನ್ನು ಮದವೆ ಮಾಡಿಕೊಡಿ ಎಂದು ರಾಮು ಮತ್ತು ಆತನ ಪೋಷಕರು ಕೇಳಲು ಬಂದಿದ್ದರು. ಆದರೆ ನಾವು ಕೊಡಲ್ಲ ಅಂತ ಹೇಳಿ ಕಳಿಸಿದ್ವಿ. ಕೊಡಲ್ಲ ಅಂದಿದ್ದಕ್ಕೆ ನನ್ನ ಮಗಳನ್ನ ಅಪರಣ ಮಾಡಿದ್ದಾರೆ ಎಂದು ಅರ್ಪಿತಾ ತಾಯಿ ಆರೋಪ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರೋಪಿ ಪತ್ತೆಗಾಗಿ ಮೂರು ತಂಡ ರಚನೆ ಮಾಡಲಾಗಿದೆ. ಸಂಬಂಧಿ ರಾಮು ಅಪಹರಣ ಮಾಡಿದ್ದಾನೆ ಎಂದು ಅರ್ಪಿತಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ ಎಂದು ಎಸ್ಪಿ ಮೊಹಮ್ಮದ್ ಸುಜೀತಾ ಹೇಳಿದರು.