This is the title of the web page
This is the title of the web page

ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಇಂದು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಮುಂಚೂಣಿ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆಪಡೆ ನಡುವೆ ಇಂದು ಬೆಳಿಗ್ಗೆ ಎನ್ಕೌಂಟರ್ ಪ್ರಾರಂಭವಾಯಿತು.

ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ ಸ್ಥಳವನ್ನು ಸುತ್ತುವರೆದ ಪೊಲೀಸರು ಹಾಗೂ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.

ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ಹೆಡೆಮುಡಿ ಕಟ್ಟಲು ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.