ಹುಬ್ಬಳ್ಳಿ: ಸ್ನೇಹಿತರೆಲ್ಲರೂ ಸೇರಿ ಗೆಳೆಯನನ್ನೇ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ.ಪೈಲ್ವಾನ್ ಆಗಿದ್ದ ಪ್ರಕಾಶ್ ಮಾನೆ ಮೃತ ರ್ದುದೈವಿ.ಗೆಳೆಯರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ ಇಬ್ಬರು ಸೇರಿ ಚಾಕುವಿನಿಂದ ಹೊಟ್ಟೆಗೆ ಇರಿದು, ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.