ತುಮಕೂರು: ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನಲೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ತುಮಕೂರು ನಿವಾಸದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಮಂತ್ರಿ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಸಿಎಂಗೆ ರಾಜಣ್ಣ ಅತಿಥ್ಯ ನೀಡುತ್ತಿದ್ದು, ಸಹಜವಾಗಿಯೇ ಈ ಬಗ್ಗೆ ಕುತೂಹಲ ಹೆಚ್ಚಿದೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮತ್ತೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಗ್ಗೆ ಬಹಿರಂಗವಾಗಿಯೇ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದು, ಇಂದು ಊಟದ ವೇಳೆ ರಾಜ್ಯ ರಾಜಕೀಯ ಚರ್ಚೆ ಸಾಧ್ಯತೆ ಇದೆ. ಈ ವೇಳೆ ಪರಮೇಶ್ವರ್ ಮತ್ತು ತುಮಕೂರು ಶಾಸಕರು ಭಾಗಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.



