ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಒತ್ತುವರಿ ತೆರವು ಪ್ರಕರಣಕ್ಕೆ ಸಂಬAಧಪಟ್ಟAತೆ ಬಿಜೆಪಿಯ ಸತ್ಯಾ ಶೋಧನಾ ಸಮಿತಿಯ ಸದಸ್ಯರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವರದಿ ಹಸ್ತಾಂತರಿಸಲಾಯಿತು. ಬೆಂಗಳೂರಿನ ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ವರದಿ ಹಸ್ತಾಂತರಿಸಲಾಗಿದೆ.
ಕೋಗಿಲು ಲೇಔಟ್ನಲ್ಲಿ ಒತ್ತುವರಿ ತೆರವು ಮಾಡಿದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಸತ್ಯಾಶೋಧನಾ ಸಮಿತಿ ರಚಿಸಿದ್ದರು. ಎಸ್.ಆರ್.ವಿಶ್ವನಾಥ್, ನವೀನ್, ತಮ್ಮೇಶ್ ಗೌಡ, ಮಾಳವಿಕಾ ಅವಿನಾಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.



