ಬೆಂಗಳೂರು: ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬ ನಾಣ್ಣುಡಿಯಂತೆ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಅವರನ್ನು ಆಯ್ಕೆ ಮಾಡಲಾಗಿದೆ.
ಎಐಸಿಸಿ ವರಷ್ಠರು ಅಧಿಕೃತವಾಗಿ ಕೆ.ವಿ.ಗೌತಮ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಕೋಲಾರ ಕಾಂಗ್ರೆಸ್ ಟಿಕೆಟ್ಗಾಗಿ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷ ರಮೇಶ್ಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದು ರಮೇಶ್ಕುಮಾರ್ ಬಣದ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುವ ಮಟ್ಟಕ್ಕೆ ಹೋಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ರಾಜಿಸಂಧಾನ ನಡೆದು ರಮೇಶ್ಕುಮಾರ್ ಬಣದವರು ತಣ್ಣಗಾಗಿ ವರಿಷ್ಠರ ತೀರ್ಮಾನಕ್ಕೆ ಮನ್ನಣೆ ನೀಡುವ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಆದರೆ ಸಚಿವ ಮುನಿಯಪ್ಪ ಮಾತ್ರ ತಮ್ಮ ಹಳೆಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಬೇಕೇ ಬೇಕು ಎಂದು ವರಿಷ್ಠರ ಮೇಲೆ ಒತ್ತಾಯ ಹೇರಲು ಮುಂದಾಗಿದ್ದರು.
ಆದರೆ ಪಕ್ಷದ ವರಿಷ್ಠರು ಎರಡು ಗುಂಪುಗಳ ಅಭ್ಯರ್ಥಿಗಳ ಕೈಬಿಟ್ಟು ಅಚ್ಛರಿ ಎಂಬಂತೆ ಮೂರನೇ ಅಭ್ಯರ್ಥಿಗೆ ಟಿಕೆಟ್ ಘೋಷಣೆ ಮಾಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.