ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಕೆ ಪಿ ನಂಜುಂಡಿ ಅವರು ಇಂದು ಬೆಳಿಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಮನೆಗೆ ಆಗಮಿಸಿ ಸುಮಾರು ಹೊತ್ತು ಚರ್ಚೆ ನಡೆಸಿದರು.ಭಾರತೀಯ ಜನತಾ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದನ್ನ ಪ್ರಕಟಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ನೀಡೋ ಮುಖಾಂತರ ರಾಜೀನಾಮೆ ಸಲ್ಲಿಸಿದರು.
ಅವರು ನೀಡಿದ ರಾಜೀನಾಮೆ ಪತ್ರವನ್ನು ಪಡೆದು ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೀರಿ ಎನ್ನುವ ಕುರಿತು ಚರ್ಚಿಸಿ ದರೂ ನಂತರ ಅವರ ರಾಜೀನಾಮೆಯನ್ನ ಅಂಗೀಕರಿಸಿದ್ದಾಗಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಕಟಿಸಿದರುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ. ನಂಜುಂಡಿ ಅವರು ವಿಶ್ವಕರ್ಮ ಸಮುದಾಯದ ರಾಜ್ಯ ನಾಯಕರಾಗಿದ್ದಾರೆ.
ರಾಜೀನಾಮೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ನಂಜುಂಡಿ ತಾವು ನಿರ್ಲಕ್ಷ್ಯ ಸಮುದಾಯಕ್ಕೆ ಕಾಯಕ ಸಮಾಜದಿಂದ ಬಂದಿದದ್ದು, ಅದರ ಅಭಿವೃದ್ಧಿಗಾಗಿ ರಾಜಕೀಯದಲ್ಲಿ ಗುರುತಿಸಿಕೊಂಡೆ. ನನ್ನನ್ನು ಕೇವಲ ಎಂಎಲ್ಸಿಯಾಗಿ ಮಾಡಿದರೆ ಹೊರತು ಯಾವುದೇ ರೀತಿಯ ಜವಾಬ್ದಾರಿ ನೀಡಲಿಲ್ಲ. ಎರಡು ವರ್ಷಗಳಿಂದ ನನ್ನ ಸಮುದಾಯದವರು ರಾಜೀನಾಮೆ ನೀಡಲು ಒತ್ತಾಯಿಸುತ್ತಿದ್ದರು. ಇದೀಗ ರಾಜೀನಾಮೆ ನೀಡಿದ್ದೇನೆ. ನಾಳೆ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ತಿಳಿಸಿದ್ದಾರೆ.