ಬೆಂಗಳೂರು: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಅಮಾನತು ಮಾಡಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಶಿವಶಂಕರಪ್ಪ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಅಗತ್ಯ ತನಿಖೆಗಾಗಿ ಭಾರತದ ಸಂವಿಧಾನದ 317(1)ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಜೊತೆಗೆ ತನಿಖೆ ಕುರಿತು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಆಯೋಗದ ಅಧ್ಯಕ್ಷ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಶಿವಶಂಕರಪ್ಪ ಅವರನ್ನು ಅಮಾನತು ಮಾಡಿದ್ದಾರೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಕರ್ನಾಟಕ ಲೋಕ ಸೇವಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ಆದೇಶಿಸಿದ್ದಾರೆ.ಕೆಪಿಎಸ್ಸಿಗೆ ಹೊಸ ಕಾನೂನು ತರಬೇಕು ಎಂದು ಗೃಹಸಚಿವ ಪ್ರಿಯಾಂಕ ಖರ್ಗೆ ಅಭಿಪ್ರಾಯ ಪಟ್ಟಿದ್ದಾರೆ.
ಕೆಪಿಎಸ್ಸಿ ಅಧ್ಯಕ್ಷರನ್ನು ರಾಜ್ಯಪಾಲರು ಅಮಾನತುಗೊಳಿಸಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಈ ಬಗ್ಗೆ ಈಗಾಗಲೇ ಸದನದಲ್ಲಿ ಎರಡುಮೂರು ಬಾರಿ ಚರ್ಚೆ ನಡೆದಿದೆ. ಸಾರ್ವಜನಿಕರು ಹಾಗೂ ಯುವಜನತೆಗೆ ಈ ಸಂಸ್ಥೆ ಬಗ್ಗೆ ಸಾಕಷ್ಟು ಅನುಮಾನ ಮೂಡುವಂತಾಗಿದೆ. ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಿರುವ ಹಿನ್ನೆಲೆಯಲ್ಲಿ ಆಡಳಿತ ಹಾಗೂ ವಿಪಕ್ಷದವರು ಸೇರಿ ಒಳ್ಳೆಯ ಕಾನೂನು ತರಬೇಕಾಗಿದೆ. ಇದೆ ಎಲ್ಲರ ಅಭಿಮತವಾಗಿದೆ ಎಂದು ಹೇಳಿದ್ದಾರೆ.
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು



