ಬೆಂಗಳೂರು: ಸಚಿವರಾದ 13 ದಿನಗಳ ನಂತರ ತಮ್ಮಗೆ ನೀಡಿದ ಖಾತೆಯ ಅಧಿಕಾರ ಸ್ವೀಕರಿಸಿದ ಸಚಿವ ಕೃಷ್ಣಬೈರೇಗೌಡ ಇಂದು ಜಿಬಿಎ ಕೇಂದ್ರಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ತಮಗೆ ನೀಡಿರುವ ಖಾತೆಯನ್ನು ಸಂಪೂರ್ಣವಾಗಿ ನೀಡಿಲ್ಲ ಎಂದು ಅಸಮಾಧಾನಗೊಂಡು ಅಧಿಕಾರ ಸ್ವೀಕರಿಸದೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ನಿನ್ನೆ ರಾತ್ರಿ ರಾಜ್ಯ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಇಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿ ಐದು ಪಾಲಿಕೆಗಳ ಆಯುಕ್ತರು ಸೇರಿದಂತೆ ಮುಖ್ಯ ಇಂಜಿನಿಯರ್ಗಳು ಮತ್ತಿತರ ಸಭೆ ನಡೆಸಿದ್ದಾರೆ.



