ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಹರಿದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟಿçÃಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಬಟ್ಟೆ ವ್ಯಾಪಾರಿ ಗಗನ್(೧೯) ಎಂಬ ಯುವಕನೇ ಮೃತದುರ್ದೈವಿ. ಸರ್ವಿಸ್ ರಸ್ತೆಯ ಮೆಟ್ರೋ ಪಿಲ್ಲರ್ ೪೮೩ ಮುಂಭಾಗ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಗಗನ್ಗೆ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಾಲಕ ನಿರ್ಲಕ್ಷತನದಿಂದ ಕೆಎಸ್ಆರ್ಟಿಸಿ ಬಸ್ಸನ್ನು ಚಾಲನೆ ಮಾಡಿ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾನೆ.
ಪೀಣ್ಯ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡು ಕೆಎಸ್ಆರ್ಟಿಸಿ ಬಸ್ ಚಾಲಕನನ್ನು ಬಂಧಿಸಿ ಕ್ರಮ ಕೈಗೊಂಡಿರುತ್ತಾರೆ.



