ರಾಮನಗರ: ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ, ಏನೂ ಮಾಡಲು ಆಗಲ್ಲ. ನನಗೆ ಯಾರು ಏನೂ ಮಾಡೋಕಾಗಲ್ಲ. ಸರ್ಕಾರದ ತಪ್ಪುಗಳನ್ನ ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೆ.
ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನು. ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದರು.
ನನ್ನ ಜೀವನ ತೆರದ ಪುಸ್ತಕ, ಯಾರು ಏನ್ ಮಾಡೋಕಾಗಲ್ಲ. ಯಾವುದೊ ಒಂದು ಶಕ್ತಿ ನಮ್ಮನ್ನು ಕಾಪಾಡುತ್ತದೆ. ಎಲ್ಲದಕ್ಕೂ ಒಂದು ಅಂತಿಮ ಇದೆ ಎಂದಿದ್ದಾರೆ. ಬರದ ವಿಚಾರವಾಗಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ರೈತರಿಗೆ ಯಾವುದೇ ಪರಿಹಾರ ಹಣವನ್ನು ಇನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ ಈ ವರ್ಷದಲ್ಲಿ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.