ನೆಲಮಂಗಲ: ತಾಲೂಕಿನ ಆಡಳಿತ ವ್ಯವಸ್ಥೆ ಭ್ರಷ್ಟಾಚಾರದ ಕೂಪವಾಗಿದ್ದು. ಕಾರ್ಮಿಕರ ಕಾರ್ಡ್ ವಿತರಣೆಯಲ್ಲಿ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕೆಲವು ಸಂಘ-ಸಂಸ್ಥೆಗಳು ಇದನ್ನೇ ಬಂಡವಾಳ ಮಾಡಿಕೊಂಡು ಕಾರ್ಮಿಕರಿಗೆ ವಂಚಿಸುತ್ತಿದ್ದಾರೆ ಎಂದು ದಲಿತ ಕೂಲಿ ಮತ್ತು ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಗಂಗಬೈಲಪ್ಪ ಆರೋಪಿಸಿದರು.
ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ದಲಿತ ಕೂಲಿ ಮತ್ತು ಕಾರ್ಮಿಕ ಸಂಘಟನೆಯ 16ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ 250 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಸನ್ಮಾನಿಸಿದ್ದೇವೆ. ಒಂದು ವರ್ಷದಿಂದ ಸಕ್ರಿಯವಾಗಿ ಆಮ್ ಆದ್ಮಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ.
ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಆಮ್ ಆದ್ಮಿ ಪಕ್ಷ ದಿಂದ ಮಾತ್ರ ಸಾಧ್ಯ. ನಾನು ಸಹ ನೆಲಮಂಗಲ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು. ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕಾರ್ಮಿಕರ ಕಾರ್ಡ್ ವಿತರಣೆಯಲ್ಲಿ ಕೆಲವು ಸಂಘ ಸಂಸ್ಥೆಗಳು ಬಂಡವಾಳವಾಗಿ ಮಾಡಿಕೊಂಡು 200 ರೂ ಗಳಿಂದ 500 ರೂ ವರೆಗೆ ವಸೂಲಿ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪವಾಡ ಶ್ರೀ ಬಸವಣ್ಣ ದೇವರು ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ದಲಿತ ಕೂಲಿ ಮತ್ತು ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಕೇಶವಮೂರ್ತಿ. ತಾಲೂಕು ಉಪಾಧ್ಯಕ್ಷ ಗಂಗರಾಜು. ಪ್ರಧಾನ ಕಾರ್ಯದರ್ಶಿ ಪ್ರಸಾದ್. ತಾಲೂಕು ಮಹಿಳಾ ಅಧ್ಯಕ್ಷೇ ಮಂಜಮ್ಮ. ರಾಜ್ಯ ಗೌರವಾಧ್ಯಕ್ಷ ಮಂಜುನಾಥಯ್ಯ. ಪದಾಧಿಕಾರಿಗಳಾದ ನಂಜುಂಡಯ್ಯ. ಮುನಿಆಂಜಿನಪ್ಪ. ಶಶಿಕುಮಾರ್. ಸಿ.ಕುಮಾರ್ ವಾಸುದೇವ್ ಮೂರ್ತಿ. ಮತ್ತಿತರರು ಉಪಸ್ಥಿತರಿದ್ದರು.
Leave a Review