ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋ
ಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ ಮಾಡಿ ಮಾತನಾಡಿ ದರು. ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ
ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದರು.
ಹಲವು ರೀತಿಯ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಶಿಕ್ಷೆ ಪ್ರಮಾಣದಲ್ಲಿ ಕರ್ನಾಟಕ ರಾಜ್ಯ ಮುಂದಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯನ್ನು ಅಭಿನಂದಿಸುವ ಜೊತೆಗೆ ಪ್ರಮಾಣ ಹೆಚ್ಚಾಗಿರುವ ಅಪರಾಧಗಳ ನಿಯಂತ್ರಣದಲ್ಲೂ ನಾವು ಶ್ರಮ ಹಾಕಬೇಕಿದೆ ಎಂದು ಸೂಚಿಸಿದರು.
ಸೈಬರ್ ಅಪರಾಧಗಳು ಸೇರಿದಂತೆ ನಾನಾ ರೀತಿಯ ಅಪರಾಧಗಳನ್ನು ತಡೆಯಲು ತಂತ್ರಜ್ಞಾನದ ಅವಕಾಶ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಯದ ಮಿತಿ ಇಲ್ಲದಂತೆ ದಿನದ 24 ಗಂಟೆಯೂ ಕರ್ತವ್ಯಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡುವುದರಿಂದ ಸಮಾಜದಲ್ಲಿ ನೆಮ್ಮದಿ ಮತ್ತು ಸೌಹಾರ್ದತೆ ನೆಲೆಸಿದೆ ಎಂದರು.
ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ



