ಕೆ.ಆರ್.ಪೇಟೆ: ದೊಡ್ಡಹಾರನಹಳ್ಳಿ ಗ್ರಾಮದ ಮುಖಂಡರು ಬಿಜೆಪಿ ಪಕ್ಷ ತೊರೆದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಳಹಳ್ಳಿ ವಿಶ್ವನಾಥ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ದೊಡ್ಡಹಾರನಹಳ್ಳಿ ಗ್ರಾಮದ ಬಿಜೆಪಿ ಮುಖಂಡರು ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹರಳಹಳ್ಳಿ ವಿಶ್ವನಾಥ್ ರವರು ಕಾಂಗ್ರೆಸ್ ಪಕ್ಷ ಹಲವಾರು ಯೋಜನೆ ಯನ್ನು ಜನಗಳಿಗೆ ತಲುಪಿಸಿದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸರ್ವ ಜನಾಂಗಕ್ಕೂ ಅಧಿಕಾರ ಬಂದಂತೆ ಎಂದು ತಿಳಿಸುತ್ತ ಮುಂಬರುವ ಲೋಕಸಭೆ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಪಕ್ಷದ ಶಕ್ತಿಯನ್ನು ಹೆಚ್ಚಿಸಿ ತಾಲ್ಲೂಕಿನಲ್ಲಿಯೂ ಕಾಂಗ್ರೆಸ್ ಪಕ್ಷವು ಗಟ್ಟಿಯಾಗಿದೆ ಎಂಬುದನ್ನು ತೋರಿಸಬೇಕಾದ ಅಗತ್ಯವಿದೆ.
ಇದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಮಾಡುತ್ತಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಡವರು, ದೀನ ದಲಿತರಿಗೆ, ಅಲ್ಪ ಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಒದಗಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಮುಖಂಡ ಪರಮೇಶ್, ಡಿ. ಸಿ ಮಹೇಶ್, ಪಟೇಲ್ ರಾಮೇಗೌಡ, ಮಹೇಶ್, ಮರಿಸ್ವಾಮಿ, ನಿಂಗರಾಜು, ರಂಗಸ್ವಾಮಿ, ಲಕ್ಕಪ್ಪ, ಮೈಲಾರಿ, ರಾಜು, ನಿಂಗರಾಜ್, ಮಂಜೇಗೌಡ, ಮಂಜಣ್ಣ, ಸೇರಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.