ಜೋಹಾನ್ಸ್ ಬರ್ಗ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಟೀಂ ಇಂಡಿಯಾ ಎಡಗೈ ದಾಂಡಿಗ ಸಾಯಿ ಸುದರ್ಶನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಅದು ಕೂಡ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ 43 ಎಸೆತಗಳಲ್ಲಿ 9 ಫೋರ್ಗಳೊಂದಿಗೆ 55 ರನ್ ಬಾರಿಸಿದ್ದರು.
ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ 50+ ಸ್ಕೋರ್ಗಳಿಸಿದ ಟೀಮ್ ಇಂಡಿಯಾ ಆರಂಭಿಕರ ಪಟ್ಟಿಗೆ ಸಾಯಿ ಹೆಸರು ಸೇರ್ಪಡೆಯಾಯಿತು.