ದೊಡ್ಡಬಳ್ಳಾಪುರ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗ ಬೇಕು. ದೇಶವು ಮತ್ತಷ್ಟು ಅಭಿವೃದ್ಧಿಯ ಪ್ರಗತಿ ಸಾಧಿಸಬೇಕು ಎನ್ನುವ ಕಾರಣದಿಂದಾಗಿ ಬಿಜೆಪಿ ಜೊತೆ ಜೆಡಿಎಸ್ -ಮೈತ್ರಿ ಮಾಡಿಕೊಂಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತ್ತೋಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗುವ ನಿಟ್ಟಿನಲ್ಲಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಒಂದುಗೂಡಿ ಕೆಲಸ ಮಾಡಬೇಕಿದೆ, ಡಾ.ಕೆ.ಸುಧಾಕರ್ ಅವರು ಈ ಹಿಂದೆ ಆರೋಗ್ಯ ಸಚಿವರಾಗಿದ್ದಾಗ ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಸಾಕಷ್ಟು ಸಕ್ರಿಯ ಕಾರ್ಯ ಕರ್ತರು ಹಾಗೂ ನಾಯಕರು ಹೆಚ್ಚಿನ ಸಂಖ್ಯೆ ಯಲ್ಲಿದ್ದಾರೆ, ಈಗಾಗಲೇ ಪಕ್ಷದ ವರಿಷ್ಠರ ಸೂಚನೆಯಂತೆ ಸಮನ್ವಯ ಸಭೆಗಳನ್ನ ನಡೆಸಲಾಗಿದೆ,ಈ ಮೂಲಕ ನಮ್ಮ ಮೈತ್ರಿ ಅಭ್ಯರ್ಥಿಯು ಅತಿದೊಡ್ಡ ಬಹುಮತದ ಮೂಲಕ ಇವರ ಗೆಲುವಿಗೆ ಶ್ರಮಿಸಿ ಎಂದರು.
ನಂತರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾ ಕರ್ ಮಾತನಾಡಿ, ದೊಡ್ಡಬಳ್ಳಾಪುರ ಹಾಗೂ ಚಿಕ್ಕಬಳ್ಳಾಪುರ ಎರಡು ನಗರಗಳಿಗೂ ಕುಡಿಯುವ ಮುಖ್ಯ ಆಸೆರೆಯಾಗಿರುವ ಜಕ್ಕಲಮಡಗು ಜಲಾಶಯದಿಂದ ನೀರು ಹರಿಯುವಂತೆ ಮಾಡುವಲ್ಲಿ ಹೆಚ್ಚಿನ ಶ್ರಮ ವಹಿಸಿರುವೆ. ಮುಂದಿನ ದಿನಗಳಲ್ಲಿ ಜಕ್ಕಲಮಡಗು ಜಲಾಶಯದಿಂದ ನಗರಕ್ಕೆ ಹೆಚ್ಚಿನ ನೀರು ದೊರೆಯುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಭೆಗೂ ಮುನ್ನ ತಾಲ್ಲೂಕಿನ ರಾಜಘಟ್ಟ ಆಂಜನೇಯ ಸ್ವಾಮಿ, ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿಕೃತ ನೀಡಲಾಯಿತು.ಸ್ಥಳೀಯ ಶಾಸಕ ಧೀರಜ್ ಮುನಿರಾಜ್, ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ,ಕಾರ್ಯದರ್ಶಿ ಡಾ.ವಿಜಯಕುಮಾರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್,ಮಾಜಿ ವಿಧಾನಪರಿಷತ್ ಸದಸ್ಯ ಇ. ಕೃಷ್ಣಪ್ಪ, ನಿಸರ್ಗನಾರಾಯಣಸ್ವಾಮಿ, ಕೆ.ಎಂ. ಹನುಮಂತರಾಯಪ್ಪ, ಎಚ್.ಅಪ್ಪಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರ ಘಟಕದ ಅಧ್ಯಕ್ಷ ಕೆ.ಬಿ. ಮುದ್ದಪ್ಪ ಇದ್ದರು.