ಗುಂಡ್ಲುಪೇಟೆ: ಬೇಸಿಗೆ ಸಮೀಪಿಸುತಿದ್ದು ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಸಮಸ್ಯೆಯಾಗದಂತೆ ಕ್ರಮವಹಿಸ ಬೇಕೆಂದು ಶಾಸಕ ಹೆಚ್ ಎಂ.ಗಣೇಶ್ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಂಡ್ಲುಪೇಟೆ ಪಟ್ಟಣದ ತಾಲ್ಲೂಕು ಕಚೇರಿ ಸಭಾಭವನದಲ್ಲಿ 2023-24ನೇಸಾಲಿನ ಬರ ಪಿಡೀತ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕ್ಷೇತ್ರದ 11ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈಗಾಗಲೇ ತಲೆದೋರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಿ ತೊಂದರೆ ಸರಿಪಡಿಸಬೇಕು ಎಂದು ತಾ.ಪಂ.ಇ.ಓ.ಗೆ ತಾಕೀತು ಮಾಡಿದರು.
ಬೇಸಿಗೆಯಲ್ಲಿ ಹಲವು ಪಂಪ್ ಸೆಟ್ ಗಳಲ್ಲಿ ನೀರು ಕಡಿಮೆ ಯಾಗಿರುವ ಕಾರಣ ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಕಾಣಿಸಿಕೊಳ್ಳುತ್ತದೆ ಆದರೆ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಕಾಣದಂತೆ ಅಧಿಕಾರಿಗಳು ಈಗಿನಿಂದಲೇ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ರಪ್ತು ಮಾಡುವುದನ್ನು ಸಹ ನಿಷೇಧಿಸಲಾಗಿದೆ.
ಆದ್ದರಿಂದ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮೇವು ಕೊರತೆಯಾಗದಂತೆ ಕ್ರಮವಹಿಸಲು ಈಗೀನಿಂದಲೆ ಸನ್ನದ್ದರಾಗಬೇಕೆಂದು ತಿಳಿಸಿದರು.ಪಟ್ಟಣದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ ಎಂದು ಪುರಸಭೆಯ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಗಣೇಶ ಪ್ರಸಾದ್ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ತಹಸೀಲ್ದಾರ್ ಟಿ.ರಮೇಶ್ ಬಾಬು, ತಾಲ್ಲೂಕು ಪಂಚಾಯಿತಿ ಕಾರ್ಯನಿವಾರ್ಹಕ ಅಧಿಕಾರಿ ರಾಮಲಿಂಗಯ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಹೆಚ್.ವಿ ಮಧುಸೂದನ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.