ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಕಾಟಂನಲ್ಲೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಭಾರತ ಮಾತೆ ಪೂಜೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಶಾಸಕಿ ಮಂಜುಳಾ ಲಿಂಬಾವಳಿ ಚಾಲನೆ ನೀಡಿದರು.
ನಂತರ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ಪ್ರತಿ ವರ್ಷದಂತೆ ಈ ವರ್ಷವು ಭಾರತ ಮಾತೆ ಪೂಜೆಯನ್ನು ಏರ್ಪಡಿಸಿರುವುದು ಕ್ಷೇತ್ರದ ಎಲ್ಲಾ ಮುಖಂಡರು ಕಾರ್ಯಕರ್ತರು ಹಾಗೂ ಘಟನಾಯಕರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ ಭಾರತ ಮಾತಾ ಪೂಜೆಯನ್ನು ನೆರವೇರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುವುದಾಗಿರುತ್ತದೆ.
ನಮ್ಮ ಕ್ಷೇತ್ರವು ಸಾಂಸ್ಕೃತಿಕ ಪ್ರತಿಭೆಗಳ ಹಂದರವಾಗಿದ್ದು, ರಾಜ್ಯ ದೇಶ, ವಿದೇಶಗಳ್ಳಿ ಕ್ರೀಡೆ, ಕಲೆ, ಸಂಗೀತ, ನೃತ್ಯ, ಹೀಗೆ ವಿವಿಧ ಕಲೆಗಳಲ್ಲಿ ದಾಖಲೆಗಳನ್ನು ಮಾಡುತ್ತಿದ್ದಾರೆ. ಈ ವರ್ಷದ ಭಾರತ ಮಾತಾ ಪೂಜೆ ಕಾರ್ಯಕ್ರಮದ ವೇದಿಕೆಯಲ್ಲಿ ಸಂಪೂರ್ಣವಾಗಿ ನಮ್ಮ ಮತಕ್ಷೇತ್ರದ ಪ್ರತಿಭೆಗಳ ಪ್ರದರ್ಶನಗಳಿಗೆಂದು ಮೀಸಲಿಟ್ಟಿದ್ದರಿಂದ ಮತ್ತಷ್ಟು ಹೊಸ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಯಿತು.
ಕಳೆದ ಫೆಬ್ರವರಿ ತಿಂಗಳ 17 ಮತ್ತು 18 ರಂದು ಕಾಟಂನಲ್ಲೂರಿನ ಜನಪದರು ರಂಗಮಂದಿರದಲ್ಲಿ ಸಾಂಸ್ಕೃತಿಕ ಪ್ರತಿಭಾ ವೇದಿಕೆಯಲ್ಲಿ ನಡೆದ ‘ಶೋಧ’ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಭಾರತ ಮಾತೆ ಪೂಜೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು ಎಂದರು.
ಭಾರತ ಮಾತಾ ಪೂಜೆ ಕಾರ್ಯಕ್ರಮದಲ್ಲಿ ದೇಶವ್ಯಾಪ್ತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹದೇವಪುರ ಕ್ಷೇತ್ರದ 32 ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು, ಕ್ಷೇತ್ರದ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಕುಟುಂಬ ಸಮೇತರಾಗಿ ಕಾರ್ಯಕ್ರಮ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ. ವಿ. ರಾಜೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಕ್ಷೇತ್ರ ನಗರ ಮಂಡಲ ಅಧ್ಯಕ್ಷ ಮನೋಹರ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ. ಎನ್. ನಟರಾಜ್, ಗೌರವಾನ್ವಿತ ಪದ್ಮಶ್ರೀ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಚಾರ್ಲ್ಸ್ ಬೊರೋಮಿಯೋ, ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಕನ್ನಡದ ಬಿಗ್ಬಾಸ್ ರಿಯಾಲಿಟಿ ಶೋದಲ್ಲಿ 4 ನೇ ಸ್ಥಾನ ಪಡೆದ ಶ್ರೀ ವರ್ತೂರು ಸಂತೋಷ್, ಮುಖಂಡರಾದ ವೆಂಕಟಸ್ವಾಮಿ ರೆಡ್ಡಿ, ಎಲ್. ರಾಜೇಶ್, ಹೂಡಿ ಪಿಳ್ಳಪ್ಪ, ಶ್ರೀಧರ್ ರೆಡ್ಡಿ, ಪಾಪಣ್ಣ, ಜ್ಯೋತಿಪುರ ವೇಣು, ಮಂಜುನಾಥ್ ಇತರರು ಇದ್ದರು.