ಬೆಂಗಳೂರು: ಬಿಜೆಪಿಯ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜು ರಾಜೀನಾಮೆ ನೀಡಿದ್ದಾರೆ.
ವಿಧಾನಪರಿಷತ್ನ ಪಶ್ಚಿಮ ಪದವೀಧರ
ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗದ ಕಾರಣ ಲಿಂಗರಾಜು ಬೇಸರ ವ್ಯಕ್ತಪಡಿಸಿ ತಮ್ಮ ರಾಜೀನಾಮೆಯನ್ನು ಪಕ್ಷದ ರಾಜ್ಯಾಧ್ಯಕ್ಷ
ಬಿ.ವೈ. ವಿಜಯೇಂದ್ರಗೆ ಸಲ್ಲಿಸಿದ್ದಾರೆ. ನಿನ್ನೆ ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿತ್ತು. ಈ ಪೈಕಿ ಪದವೀಧರ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದ ಲಿಂಗರಾಜು ಅವರಿಗೆ ಟಿಕೆಟ್ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೇಸರಗೊಂಡು ರಾಜೀನಾಮೆ ಸಲ್ಲಿಸಿರುವ ಲಿಂಗರಾಜು ಕಳೆದ ಮೂರು ದಶಕಗಳಿಂದ ಪಕ್ಷಕ್ಕೆ ನಿಷ್ಟನಾಗಿ ದುಡಿದರು ನಮಗೆ ವಿಧಾನಪರಿಷತ್ಗೆ ಸ್ಪರ್ಧಿಸಲು ಅವಕಾಶ ದೊರೆತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.



