This is the title of the web page
This is the title of the web page

ಪಿಪಿಎಫ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ನವದೆಹಲಿ: ಪಿಪಿಎಫ್, ಎನ್.ಎಸ್.ಸಿ. ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸೆಪ್ಟೆಂಬರ್ 30 ಆಧಾರ್ ಜೋಡಣೆ ಮಾಡಲು ಕೊನೆಯ ದಿನವಾಗಿದೆ.

ಸಾಮಾಜಿಕ ಭವಿಷ್ಯ ನಿಧಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ, ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಣ ಇಟ್ಟವರು ಆಧಾರ್ ಸಂಖ್ಯೆಯನ್ನು ಜೋಡಿಸಬೇಕು.ಅಂಚೆ ಕಚೇರಿ ಅಥವಾ ಬ್ಯಾಂಕುಗಳಿಗೆ ತೆರಳಿ ಆಧಾರ್ ಜೋಡಣೆಗೆ ಸೂಚನೆ ನೀಡಲಾಗಿದೆ.

ಆಧಾರ್ ಜೋಡಣೆ ಮಾಡದಿದ್ದರೆ ಖಾತೆಗಳಲ್ಲಿನ ಹಣ ಫ್ರೀಜ್ ಮಾಡಲಾಗುವುದು ಎಂದು ಹೇಳಲಾಗಿದೆ.ಹಣಕಾಸು ಸಚಿವಾಲಯವು ಮಾರ್ಚ್ 31 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಸಾರ್ವಜನಿಕ ಭವಿಷ್ಯ ನಿಧಿ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಮತ್ತು ವಿವಿಧ ಪ್ರಮುಖ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಮತ್ತು ಶಾಶ್ವತ ಖಾತೆ ಸಂಖ್ಯೆಯನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಲಿಂಕ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗಡುವು ಈಗ ಬಹಳ ಹತ್ತಿರದಲ್ಲಿದೆ. ಸೆಪ್ಟೆಂಬರ್ 30 ಕೊನೆ ದಿನವಾಗಿದೆ.