ಚಿತ್ರದುರ್ಗ: ಈ ನೆಲದ ತತ್ವಪದಕಾರರ ಅಂತರAಗದ ಒಡನಾಟದೊಂದಿಗೆ, ಮಣ್ಣಿನ ಸತ್ವ ಮತ್ತು ಜೀವತಂತುವನ್ನು ಮೀಟಿದ ಅಪರೂಪದ ಸಾಹಿತಿ, ಸಂಶೋಧಕ ಡಾ.ಜೆ.ಕರಿಯಪ್ಪ ಮಾಳಿಗೆ ಎಂದು ಸಂಸ್ಕೃತಿ ಚಿಂತಕ
ಡಾ.ಎಸ್.ನಟರಾಜ ಬೂದಾಳು ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಮೀಪದ ಕ್ರೀಡಾ ಭವನದಲ್ಲಿ ಭಾನುವಾರ ಪತ್ರಕರ್ತರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸಾಹಿತಿ, ಸಂಶೋಧಕ ಡಾ.ಜೆ.ಕರಿಯಪ್ಪ ಮಾಳಿಗೆ ಸಾಹಿತ್ಯ-ಕೃತಿ ನಡೆ-ನುಡಿ, ಕುರಿತು ಉಪನ್ಯಾಸ ಹಾಗೂ ಅವರಿಗೆ ಗೌರವಾರ್ಪಣೆ ಮತ್ತು ವಿಶಿಷ್ಟ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ತತ್ವಪದ ಮತ್ತು ಅವಧೂತ ಪರಂಪರೆ ಕುರಿತುಮಾತನಾಡಿದರು. ತತ್ವಪದಕಾರರ ಪರಂಪರೆಯೊAದಿಗೆ ಅವಿನಾಭಾವ ಸಂಬAಧ ಹೊಂದಿರುವ ಕರಿಯಪ್ಪ ಮಾಳಿಗೆ ಈ ನೆ ಲದ ನಿಜವಾದ ಪ್ರತಿನಿಧಿ. ಚಿತ್ರದುರ್ಗದ ನೈಜ ಸತ್ವವನ್ನು ಅರ್ಥಮಾಡಿ ಕೊಂ ಡಿರುವ ಅವರು,ಈ ಮಣ್ಣಿನ ಸಂಸ್ಕೃತಿ ಬೇರುಗಳನ್ನು ಮೀಟಿದ ವರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚಿತ್ರದುರ್ಗದ ಬಹುತ್ವವೇ ಈ ನೆಲದ ನಿಜವಾದ ಶಕ್ತಿ. ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗದಲ್ಲಿ ಯಾವುದೇ ಒಂದು ನಿರ್ದಿಷ್ಟ ಜಾತಿ ಬಲಿಷ್ಠವಾಗಿಲ್ಲದಿರುವುದು ಈ ನೆಲದ ಹೆಮ್ಮೆಯ ವಿಷಯ. ಬೇಡರು,ಬೆಸ್ತರು, ಉಪ್ಪಾರರು, ಗಾಣಿಗರು, ಕುರುಬರು, ದಲಿತರುಹಾಗೂ ಮುಸ್ಲಿಂರು ಸೇರಿದಂತೆ ಅನೇಕ ಸಮುದಾಯಗಳು ಸಮಾನವಾಗಿ ಬೆರೆತು ಬಾಳುತ್ತಿವೆ. ಈ ಬಹುತ್ವವೇ ಇಲ್ಲಿನ ಜನರನ್ನು ಒಟ್ಟಾಗಿ ಹಿಡಿದಿಟ್ಟಿದೆ ಎಂದು ತಿಳಿಸಿದ ಅವರು, ನಮ್ಮ ಸಾಂಸ್ಕತಿಕ ಇಕ್ಕಟ್ಟುಗಳ ಮಧ್ಯೆ ಬದು ಕುತ್ತಿರುವ ನಮಗೆ, ತತ್ವಪದಗಳ ಮೂಲಕ ಆಂತರಿಕ ಯಾನ ಮಾಡಿಸಿ ದ ಅಪರೂಪದ ವ್ಯಕ್ತಿತ್ವ ಎಂದು ಬಣ್ಣಿಸಿದರು.
ಡಾ.ಜೆ.ಕರಿಯಪ್ಪ ಮಾಳಿಗೆ ಅವರ ಸಂಪಾದನೆ ಕೃತಿಗಳ ಕುರಿತು ವಿಮರ್ಶಕ ಡಾ.ಲೋಕೇಶ್ ಅಗಸನಕಟ್ಟೆ ಮಾತನಾಡಿ, ಬರವಣಿಗೆ ಎಂಬುದು ಕೇವಲ ಅಕ್ಷರಗಳ ಜೋಡಣೆಯಲ್ಲ, ಅದು ಬದುಕಿನ ನಡೆಯನ್ನೇ ಪ್ರತಿಬಿಂಬಿಸುವ ಕನ್ನಡಿಯಾಗಬೇಕು. ಕರಿಯಪ್ಪ ಮಾಳಿಗೆ ಅವರ ಬದುಕು ಮತ್ತು ಬರಹ ಎರಡೂ ಒಂದೇ ಆಗಿವೆ ಎಂದು ತಿಳಿಸಿದರು.ಜಾನಪದ ವಿಶ್ವವಿದ್ಯಾಲಯದ ಮಹತ್ವಾಕಾಂಕ್ಷೆಯ ಗ್ರಾಮ ಚರಿತ್ರೆ ಮತ್ತು ಗ್ರಾಮ ಕೋಶ ಸಿದ್ಧಪಡಿಸುವಲ್ಲಿ ಕರಿಯಪ್ಪ ಅವರ ಶ್ರಮ ಅಪಾರವಾದುದು.
ಸಂಶೋದನೆ ಕುರಿತು ಕವಯಿತ್ರಿ ತಾರಿಣಿ ಶುಭದಾಯಿನಿ ಮಾತನಾಡಿ, ಶೈಕ್ಷಣಿಕ ಕ್ಷೇತ್ರ ಮತ್ತು ಬದುಕಿನ ಹಾದಿ ಎರಡರಲ್ಲೂ ಡಾ.ಜೆ.ಕರಿಯಪ್ಪ ಮಾಳಿಗೆ ಅವರು ಹಾಕಿಕೊಟ್ಟಿರುವ ಹೆಜ್ಜೆಗುರುತುಗಳು ಅತ್ಯಂತ ಪ್ರಭಾ ವಶಾಲಿಯಾಗಿವೆ. ಸಂಶೋಧನೆಯು ಕೇವಲ ಅಂಕಿ-ಅAಶಗಳ ಸಂಗ್ರಹ ವಾಗದೆ, ಆ ನೆಲದ ಮಣ್ಣಿನ ಗುಣ, ಜನರ ಆಹಾರ ಪದ್ಧತಿ ಮತ್ತು ಅವರು ಕಟ್ಟುಕೊಂಡಿರುವ ತಾತ್ವಿಕ ಸತ್ವದ ಶೋಧನೆಯಾಗಬೇಕು ಎಂದು ತಿಳಿಸಿದ ಅವರು, ಮಾಳಿಗೆ ಅವರು ಗಾದೆಗಳು ಮತ್ತು ಜನಪದ ಕಥನಗಳ ಮೂಲಕ ಸಂಸ್ಕೃತಿಕಾ ಸತ್ವವನ್ನು ಶೋಧಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ವಚನ ಸಾಹಿತ್ಯ ಓದಿನಿಂದ ಬದುಕಿಗೆ ಶಕ್ತಿ: ಡಾ.ಜೆ.ಕರಿಯಪ್ಪ ಮಾಳಿಗೆ: ಯುವಜನತೆ ತಮ್ಮ ಬದುಕಿನ ಅಸ್ಮಿತೆ ಮತ್ತು ಶಕ್ತಿಯನ್ನು ಕಂಡುಕೊಳ್ಳಲು ವಚನ ಸಾಹಿತ್ಯದ ಓದು ಅನಿವಾರ್ಯ ಎಂದು ಚಿಂತಕ ಡಾ.ಜೆ.ಕರಿಯಪ್ಪ ಮಾಳಿಗೆ ಅಭಿಪ್ರಾಯಪಟ್ಟರು. ತಾವು ವೃತ್ತಿ ಜೀವನಕ್ಕೆ ಸೇರಿದಾಗ ಬಸವಣ್ಣನವರ ವಚನಗಳ ಪುಸ್ತಕವನ್ನೇ ಸ್ಫೂರ್ತಿಯಾಗಿ ಇಟ್ಟುಕೊಂಡಿದ್ದಾಗಿ ಸ್ಮರಿಸಿದ ಅವರು, ಇಂದು ತಮ್ಮ ಬಳಿ ಸಮೃದ್ಧವಾದ ವೈಯಕ್ತಿಕ ಗ್ರಂಥಾಲಯವಿದ್ದು, ನಿರಂತರ ಓದಿನಲ್ಲಿ ತೊಡಗಿರುವುದಾಗಿ ತಿಳಿಸಿದರು. ವಚನ ಸಾಹಿತ್ಯದ ತತ್ವ ಸಿದ್ಧಾಂತಗಳು ಕೇವಲ ಭಾಷಣಕ್ಕೆ ಸೀಮಿತವಾಗದೆ, ಅವುಗಳನ್ನು ವೃತ್ತಿ ಮತ್ತು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕತೆ ಲಭಿಸುತ್ತದೆ ಎಂದು ತಿಳಿಸಿದ ಅವರು, ನಡೆ ಮತ್ತು ನುಡಿಯಲ್ಲಿ ಸಾಮರಸ್ಯ ಇರಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಡಾ.ಜೆ.ಕರಿಯಪ್ಪ ಮಾಳಿಗೆ ಹಾಗೂ ಅವರ ಪತ್ನಿ ಮಹದೇವಮ್ಮ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಹೋಬಲ ಟಿವಿಎಸ್ ಮಾಲೀಕಟಿ.ವಿ. ಅರುಣ್ ಕುಮಾರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೀರೇಶ ವಿ. ಅಪ್ಪು, ನಿರ್ದೇಶಕ ವೀರೇಂದ್ರ ಕುಮಾರ್ ಕೋಗುಂಡೆ ಮಠ, ರಾಜ್ಯ ಸಮಿತಿ ಸದಸ್ಯ ಎಸ್.ಸಿದ್ದರಾಜು, ಪತ್ರಕರ್ತರಾದ ಮಹೇಶ್ ಬಾಬು, ಕೆ.ಪಿ.ಓಂಕಾರಮೂರ್ತಿ, ದಾವಣಗೆರೆ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ವಿಜಯ್ ಕುಮಾರ್, ಸರ್ಕಾರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ.ಕೆ.ಚಿತ್ತಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಾಹಿತಿ ಸಂಶೋಧಕ ಡಾ.ಜೆ.ಕರಿಯಪ್ಪ ಮಾಳಿಗೆ ಅವರಿಗೆ ಪತ್ರಕರ್ತರಿಂದ ಗೌರವಾರ್ಪಣೆ



