ವಾರಾಣಸಿ: ಲಿವ್-ಇನ್ ಸಂಬAಧದ ಬಗ್ಗೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ನೀಡಿರುವ ಹೇಳಿಕೆ ಎಲ್ಲೆಡೆ ಸಂಚಲನ ಸೃಷ್ಟಿಸಿದೆ.
ಲಿವ್-ಇನ್ ಸಂಬAಧದಿAದ ದೂರವಿರಿ ಇಲ್ಲದಿದ್ದರೆ ನಿಮ್ಮನ್ನು ೫೦ ತುಂಡುಗಳಾಗಿ ಕತ್ತರಿಸುತ್ತಾರೆ ಎಂದು ಎಚ್ಚರಿಕೆಯ ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳು ಈ ಲಿವ್-ಇನ್ ಸಂಬAಧವನ್ನು ತಪ್ಪಿಸುವಂತೆ ಒತ್ತಾಯಿಸುತ್ತಾ, ನಾನು ಹುಡುಗಿಯರಿಗೆ ಒಂದು ವಿಷಯ ಹೇಳಲು ಬಯಸುತ್ತೇನೆ, ಇತ್ತೀಚಿನ ದಿನಗಳಲ್ಲಿ ಲಿವ್-ಇನ್ ಸಂಬAಧಗಳು ಒಂದು ಪ್ರವೃತ್ತಿಯಾಗಿದೆ. ಆದರೆ ಅದರಿಂದ ದೂರವಿರಿ ಎಂದು ಹೇಳಿದರು.
ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯಾಗಿರುವ ರಾಜ್ಯಪಾಲರು ಕಟು ಎಚ್ಚರಿಕೆ ನೀಡಿದ್ದಾರೆ. ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ ೪೭ ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯಾಗಿಯೂ ಸೇವೆ ಸಲ್ಲಿಸುತ್ತಿರುವ ರಾಜ್ಯಪಾಲರು, ಮಹಿಳೆಯರ ಮೇಲಿನ ಹೆಚ್ಚುತ್ತಿರುವ ಹಿಂಸಾಚಾರ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಹುಡುಗಿಯರು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಜಾಗರೂಕರಾಗಿರಲು ಸಲಹೆ ನೀಡಿದರು.ಬುದ್ಧಿವಂತಿಕೆಯಿAದ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮತ್ತು ತಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವ ಜನರ ಬಗ್ಗೆ ಜಾಗೃತರಾಗಿರಲು ಅವರು ಕರೆ ನೀಡಿದರು.