ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಡಾ. ಕೆ. ಸುಧಾಕರ್ ಕಾಂಗ್ರೆಸ್ನಿಂದ ಕಣಕ್ಕಿಳಿಯುತ್ತಾರಾ ಎಂಬ ಮಾಹಿತಿ ಉನ್ನತ ಮೂಲಗಳಿಂದಲೇ ಲಭ್ಯವಾಗಿದೆ.
ಸದ್ಯ ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಡಾ.ಕೆ. ಸುಧಾಕರ್ ಬಿಜೆಪಿ ಹೈಕಮಾಂಡ್ ನಾಯಕರ ಬಳಿ ಚಿಕ್ಕಬಳ್ಳಾಪುರ ಅಥವಾ ಬೆಂಗಳೂರು ಉತ್ತರ ಕ್ಷೇತ್ರಗಳ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.ಡಾ.ಕೆ.ಸುಧಾಕರ್ ಜೊತೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಬಹುತೇಕ ಅಂತಿಮ ಎಂದು ಹೇಳಲಾಗಿದೆ.
ಅಲೋಕ್ ವಿಶ್ವನಾಥ್ಗೆ ಚಿಕ್ಕಬಳ್ಳಾಪುರ ಟಿಕೆಟ್ ನೀಡಿದರೆ, ತಮಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಡಿವಿಎಸ್ ಸೇರಿದಂತೆ ಹಲವು ನಾಯಕರ ಕಣ್ಣು. ಹೀಗಾಗಿ, ಅದೇ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆಸಿರುವ ಡಾ.ಕೆ.ಸುಧಾಕರ್,ಬಿಜೆಪಿ ಟಿಕೆಟ್ ಸಿಗದೇ ಹೋದರೆ , ಕಾಂಗ್ರೆಸ್ನಿಂದ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಲು ಸಜ್ಜಾಗಿದ್ದಾರೆ ಎನ್ನಲಾಗಿದೆ.