ಬೆಂಗಳೂರು: ಮುಂಬರು ವ ಲೋಕಸಭಾ ಚುನಾವಣೆಗೆ ನಡೆದಿರುವ ಸಿದ್ಧತೆ ಕುರಿತಂತೆ ಭಾರತ ಚುನಾವಣಾ ಆಯೋಗದ ಕಾರ್ಯದರ್ಶಿ ಅಜಯ್ ಕುಮಾರ್ ವರ್ಮಾ ಮತ್ತು ಆಯೋಗದ ಅಧೀನ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರು, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರನ್ನು ಭೇಟಿ ಮಾಡಿ, ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ, ಸ್ವೀಪ್ ಚಟುವಟಿಕೆಗಳ ಬಗ್ಗೆ ಈ ಮಹತ್ವದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಾಮಚಂದ್ರನ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ಹರೀಶ್ ಕುಮಾರ್, ಕೆ. ಎ. ದಯಾನಂದ ಸೇರಿದಂತೆ ಚುನಾವಣಾ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.