ಹೊಸಕೋಟೆ: ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ, ಅಗತ್ಯವಾದ ಮೂಲಭೂತ ಶಿಕ್ಷಣ, ಧಾರ್ಮಿಕ ಹಕ್ಕುಗಳು ದಕ್ಕುವಂತಾಗಿದೆ ಎಂದು ಲೋಕಸಭಾ ಸದಸ್ಯ ಬಿ.ಎನ್ ಬಚ್ಚೇಗೌಡ ತಿಳಿಸಿದರು.
ನಗರದ ಚನ್ನಬೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75 ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ಸಂವಿಧಾನವು 1949ರ ನವಂಬರ್ 26ರಂದು ಅಂಗೀಕಾರವಾಗಿ 1950 ರ ಜನವರಿ 26ರಂದು ಜಾರಿಗೆ ಬಂದಿತು. ಈ ದಿನವನ್ನು ಸಂಭ್ರಮಿಸಲು ನಾವು ಪ್ರತಿ ವರ್ಷ ಈ ಗಣರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ನಮ್ಮ ಸಂವಿಧಾನವು ರಷ್ಯಾ ಬ್ರಿಟನ್, ಅಮೇರಿಕಾದಂತಹ ಇತರೆ ದೇಶಗಳ ಸಂವಿಧಾನಗಳ ಅಂಶಗಳನ್ನು ಹೊಂದಿದೆ. ಆದ್ದರಿಂದಲೇ ನಮ್ಮ ಸಂವಿಧಾನ ಎಂಬುದು ಭಾರತದ ಸರ್ವೋಚ್ಛ ಕಾನೂನಾಗಿದೆ.
ಸಂವಿಧಾನವನ್ನು ನಾವು ಗೌರವಿಸುವುದರೊಂದಿಗೆ ಕಡ್ಡಾಯವಾಗಿ ಅನುಸರಿಸಬೇಕು. ಇದರಲ್ಲಿರುವ ಮೂಲಭೂತ ಕರ್ತವ್ಯಗಳನ್ನು ಸಹ ಪಾಲಿಸುವ ಮೂಲಕ ಹಕ್ಕುಗಳನ್ನು ಪಡೆಯಬೇಕು ಎಂದು ತಿಳಿಸಿದರು.ಶಾಸಕ ಶರತ್ ಬಚ್ಚೇಗೌಡ ಮಾತನಾಡಿ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಏಕತೆ, ಬ್ರಾತೃತ್ವ ನಮ್ಮ ಸಂವಿಧಾನದಲ್ಲಿ ಇರುವ ಪ್ರಮುಖ ಐದು ಮೌಲ್ಯಗಳಾಗಿವೆ.
ಈ ರಾಷ್ಟ್ರೀಯ ಹಬ್ಬವು ದೇಶದ ಏಕತೆ ಮತ್ತು ಹೆಮ್ಮೆಯನ್ನು ಕಾಪಾಡಿಕೊಳ್ಳಲು ನಮಗೆಲ್ಲರಿಗೂ ಅವಕಾಶವನ್ನು ನೀಡುತ್ತದೆ. ಇದೆ ಮಂತ್ರವನ್ನ ನಾವೆಲ್ಲರೂ ಸಹ ಜಪಿಸುತ್ತಾ ಸದಾ ನೆನಪಿನಲ್ಲಿಟ್ಟುಕೊಂಡು ಚೆನ್ನಾಗಿ ಓದಿ ಈ ದೇಶವನ್ನು ಇನ್ನಷ್ಟು ಅಭಿವೃದ್ಧಿಯತ್ತ ಸಾಗಿಸೋಣ.
ಜೊತೆಗೆ ಸಂವಿಧಾನ ರಚನೆಗೆದುಡಿದ ಮಹಾನ್ ವ್ಯಕ್ತಿಗಳನ್ನು ಗೌರವಿಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ ಎಂದರು. ನಗರದ ವಿವಿಧ ಶಾಲೆಗಳಿಂದ ಆಗಮಿಸಿದಂತಹ ಸಾವಿರಾರು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಪಥಸಂಚಲನ ನಡೆಯಿತು.
ತಹಶೀಲ್ದಾರ್ ವಿಜಯ್ಕುಮಾರ್ ತಾಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಚಂದ್ರಶೇಖರ್, ನಗರಸಭೆ ಪೌರಾಯುಕ್ತ ಜಹೀರ್ ಅಬ್ಬಾಸ್, ನಗರಸಭೆ ಸದಸ್ಯರಾದ ಕೇಶವಮೂರ್ತಿ, ಗೌತಮ್, ಮಾದಾರ ಮಹಸಭಾ ಉಪಾಧ್ಯಕ್ಷ ಎಚ್.ಎಂ.ಸುಬ್ಬರಾಜ್, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.