ಬಿಡದಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಯತೀಶ್ ಚಂದ್ರ ಅವರ ಮನೆ ಹಾಗೂ ಗ್ರಾಮ ಪಂಚಾಯತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ.
ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಹಾಗೂ ಮೈಸೂರಿನ ನಿವಾಸದ ಮೇಲೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ಸುಮಾರು 10ಕ್ಕು ಹೆಚ್ಚು ಅಧಿಕಾರಿಗಳ ತಂಡ ದಾಳಿ ಮಾಡಿದೆ. ಗ್ರಾಮ ಪಂಚಾಯತಿ ಕಚೇರಿಯಲ್ಲಿ ಹಲವು ಕಡತಗಳನ್ನ ಪರಿಶೀಲನೆ ಮಾಡಲಾಗುತ್ತಿದೆ. ಅದೆ ರೀತಿ ಮೈಸೂರಿನ ಮನೆಯಲ್ಲು ಸಹ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.