ಹೊಸಕೋಟೆ: ತಾಲ್ಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಿಢೀರ್ ದಾಳಿ ನಡೆಸಿದ್ದು
ಭೂಮಾಪನ ಹಾಗೂ ಭೂ ದಾಖಲೆಗಳ ಕಡತಗಳ ಪರಿಶೀಲನೆ ನಡೆಸಿದರು.
ಕೋಲಾರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಸೂಪರಿಂಟೆಂಡೆಂಟ್ ಉಮೇಶ್, ಡಿವೈಎಸ್ಪಿ ಸೂರ್ಯನಾರಾ ಯಣ್ ಅವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ಗಳಾದ ಯಶವಂತ್ ಕುಮಾರ್, ರೇಣುಕಾ ಸೇರಿದಂತೆ ಸಿಬ್ಬಂದಿ ವರ್ಗ ದಾಳಿ ಮಾಡಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದರು.
ಸಾರ್ವಜನಿಕರ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಐದು ಕಾರುಗಳಲ್ಲಿ ಆಗಮಿಸಿ ಮದ್ಯಾಹ್ನ ಮೂರು ಗಂಟೆ ವೇಳೆಗೆ ಆಗಮಿಸಿ ತಾಲೂಕು ಕಚೇರಿ ಮೇಲೆ ದಾಳಿ ಮಾಡಿದರು.
ಸಾರ್ವಜನಿಕರನ್ನು ಹೊರಗೆ ಕಳುಹಿಸಿದ ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ ಜೊತೆಗೆ ಅಧಿಕಾರಿಗಳ ವಿಚಾರಣೆ ನಡೆಸಿ ಮಾಹಿತಿ ಕೂಡ ಸಂಗ್ರಹಿಸಿದರು. ದಿಡೀರ್ ದಾಳಿಯಿಂದ ಕೆಲವು ಸಿಬ್ಬಂದಿವರ್ಗದವರು ಗಾಬರಿಗೊಂಡರು.