ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸು ಟನಲ್ ರಸ್ತೆ ಡಿಪಿಆರ್ನಲ್ಲಿ ಲೋಪದೋಷ ಕಂಡುಬAದಿದೆ. ಹೀಗಾಗಿ ಆರಂಭದಲ್ಲೇ ಯೋಜನೆಗೆ ವಿಘ್ನ ಎದುರಾಗಿದೆ.
ಟನಲ್ ಡಿಪಿಆರ್ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರವೇ ನಗರಾಭಿವೃದ್ಧಿ ಇಲಾಖೆಯ ಐವರ ತಜ್ಞರ ಸಮಿತಿ ರಚನೆ ಮಾಡಿತ್ತು. ಈಗ ಆ ಸಮಿತಿಯೇ ಡಿಪಿಆರ್ನಲ್ಲಿ ಇರುವ ಲೋಪದೋಷಗಳನ್ನ ಪತ್ತೆಹಚ್ಚಿದೆ.
ತರಾತುರಿಯಲ್ಲಿ ಡಿಪಿಆರ್ ತಯಾರಿಕೆ ಮಾಡಿದ್ದಾರೆ ಎಂದು ಹೇಳಿರುವ ಸಮಿತಿ ಟನಲ್ ದೊಡ್ಡ ಯೋಜನೆ ಕೇವಲ ೪ ಕಡೆ ಮಾತ್ರ ಮಣ್ಣಿನ ಪರೀಕ್ಷೆ ಇದು ಸಾಕಾಗಲ್ಲ ಎಂದು ತಿಳಿಸಿದೆ. ಹೆಬ್ಬಾಳ – ಸಿಲ್ಕ್ ಬೋರ್ಡ್ಗೆ ರೆಡ್ಲೈನ್ ಮೆಟ್ರೋ ಮಾರ್ಗ ಬರಬೇಕಾದರೆ ಟನಲ್ ಏಕೆ? ಲಾಲ್ ಬಾಗ್ ಬಳಿ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಯಾಕೆ ಅಂತಲೂ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ? ಹೀಗಾಗಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಅನ್ನೋದನ್ನ ಕಾದುನೋಡಬೇಕಿದೆ.