ರಾಜೇಶ್ ನಟರಂಗ ಈ ಚಿತ್ರದ ಬಹುಮುಖ್ಯ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಬಗ್ಗೆ ಮಾತಾಡಿರುವ ರಾಜೇಶ್ ಅವರು, ನಿರ್ದೇಶಕರ ಕಸುಬುದಾರಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ತಾನಿಲ್ಲಿ ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ನಟಿಸಿರುವ ಸುಳಿವನ್ನು ಬಿಟ್ಟು ಕೊಟ್ಟರು. ಪ್ರೀತಿಯೆಂಬುದು ಯಾವ ಕಾಲಕ್ಕೂ ಹಳತಾಗದ ವಿಚಾರ. ಈ ಭೂಮಿಕೆಯಲ್ಲಿಯೇ ರೂಪುಗೊಂಡಿರುವ ಈ ಚಿತ್ರ ಎಂದರು.ಎನ್.ಆರ್ ಮಂಜುನಾಥ ಚಿತ್ರದ ನಿರ್ಮಾಪಕ..
ಕೃತ್ವಿಕ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈ ಚಿತ್ರದ ನಾಯಕ, ರಂಗಭೂಮಿ ಕಲಾವಿದ ಮುಕುಂದ ರಾಮಸ್ವಾಮಿ ಹಾಗೂ ನಾಯಕಿಯರಾದ ದಿಯಾ ಕೀರ್ತಿ ಮತ್ತು ಚಂದನಾ ಗೌಡ ಸಹ ಪಾತ್ರಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು. ಸಂಗೀತ ನಿರ್ದೇಶಕ ವೀರ್ ಸಮರ್ಥ್ ಈ ಸಿನಿಮಾ ಹಾಡುಗಳು ಭಿನ್ನ ಅಂದರು.ಚಿತ್ರ ಜೂನ್ ತಿಂಗಳಲ್ಲಿ ಬಿಡುಗಡೆಗೊಳ್ಳಲಿದೆ. ಇದೀಗ ಟೀಸರ್ ಬಿಡುಗಡೆಗೊಂಡಿದೆ. ಮುಂದಿನ ದಿನಗಳಲ್ಲಿ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಗೊಳ್ಳಲಿದೆ. ಬೆಂಗಳೂರಿನಲ್ಲಿಯೇ ಚಿತ್ರೀಕರಣ ನಡೆದಿದೆ. ಮುಕುಂದ ರಾಮಸ್ವಾಮಿ ನಾಯಕನಾಗಿ, ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ನಾಯಕಿಯರಾಗಿ ಜೊತೆಯಾಗಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.
ಲವ್ ಸೀಸನ್ಸ್ ಟೀಸರ್ ಬಂತು!! ಲವ್ ಸೀಸನ್ಸ್ ಚಿತ್ರೀಕರಣ ಮುಗಿದಿದೆ.. ಟೀಸರ್ ಹೊರಬಂದಿದೆ..



