ಬೆಂಗಳೂರು: ಎರಡನೇ ಲವ್ ಸ್ಟೋರಿ ಬಗ್ಗೆ ಪ್ರಶ್ನಿಸಿದ ಪ್ರಿಯಕರನಿಗೆ ವಿವಾಹಿತ ಮಹಿಳೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಘಟನೆ ನಗರದ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್ಟೇಬಲ್ ಸಂಜಯ್ ಮತ್ತು ಹೋಮ್ ಗಾರ್ಡ್ ರಾಣಿ ಲವ್ ಸ್ಟೋರಿ ಠಾಣೆ ಮೆಟ್ಟಿಲೇರಿದೆ.
ಕಾನ್ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು.
ಇತ್ತೀಚೆಗೆ ಸಂಜಯ್ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ.
ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಕಾನ್ಸ್ಟೇಬಲ್ ಸಂಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಪುಟ್ಟೇನಹಳ್ಳಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.