ಬೆಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗುಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮತ್ತು ಮೈಸೂರು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಾಯುಭಾರ ಕುಸಿತ’ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ



