ಬೆಂಗಳೂರು: ಎಲ್ಲ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ. ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿ 50 ವರ್ಷ ಪೂರೈಸಿದೆ. ಖಾಲಿ ಇರುವ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲನೆಯಲ್ಲಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆ ನಡೆಸುತ್ತೇವೆ. 600 ಸರ್ಕಾರಿ ಶಾಲೆ ಆರಂಭಿಸುವ ಗುರಿ ಹೊಂದಿದ್ದೇವೆ.
ಲಿಂಗಸೂರು ಸರ್ಕಾರಿ ಶಾಲೆಯನ್ನು ಅತ್ಯುತ್ತಮ ಶಾಲೆಯಾಗಿ ಆಯ್ಕೆ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಾಲಾ ವಿದ್ಯಾರ್ಥಿಗಳ ಬ್ಯಾಗ್ ಹೊರೆ ಶೇ.50ರಷ್ಟು ಕಡಿಮೆ ಮಾಡುತ್ತೇವೆ. 600 ಸರ್ಕಾರಿ ಶಾಲೆ ಆರಂಭಿಸುವ ಗುರಿ ಹೊಂದಿದ್ದೇವೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಸಮಾನತೆ ಮತ್ತು ರಾಷ್ಟ್ರೀಯ ಮೌಲ್ಯ ರೂಪಿಸಿ ಉತ್ತಮ ಪ್ರಜೆಯಾಗಿಸುವ ಗುರಿ ನಮ್ಮದು. ಸ್ವಯಂಸೇವ ಸಂಘಗಳೊಂದಿಗೆ ಹಾಲು ನೀಡುವ ಯೋಜನೆಗೆ ಶೀಘ್ರವಾಗಿ ಜಾರಿ ಮಾಡಲಾಗುತ್ತೆ. ಸಸ್ಯಶಾಮಲ ಯೋಜನೆ ಜಾರಿ ಮಾಡುತ್ತೇವೆ ಎಂದರು.