ಹನೂರು: ತಾಲ್ಲೂಕಿನ ಹಳೆ ಮಾರ್ಟಳ್ಳಿ ಗ್ರಾಮದಿಂದ ಮತದಾನ ಮಾಡಿ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳೆ ಮಾರ್ಟಳ್ಳಿ ಗ್ರಾಮದಲ್ಲಿ ಮತದಾನ ಮಾಡಿ ವಾಪಸ್ ತಮ್ಮ ಸ್ವಗ್ರಾಮವಾದ ತೋಕರೆಯತ್ತ ಪತಿ ಪತ್ನಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಗೆ ಪುಟ್ಟಸ್ವಾಮಿ (42)ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ನಂತರ ಪತ್ನಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ರೈತ ಸಂಘದ ಮುಖಂಡರುಗಳು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Leave a Review