ಬೆಂಗಳೂರು: ಅಪರಿಚಿತ ಕಾರೊಂದು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೆಜೆಸ್ಟಿಕ್ನಿಂದ ಫ್ರೀಡಂ ಪಾರ್ಕ್ ಕಡೆ ತೆರಳುವ ಫ್ಲೈಓವರ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸುಮಾರು 9.30 ವೇಳೆಯಲ್ಲಿ ದುರ್ಘಟನೆ ನಡೆದಿದೆ.
ವಾಹನ ಡಿಕ್ಕಿಯಾಗಿ ವ್ಯಕ್ತಿಯ ದೇಹವನ್ನು ಸುಮಾರು 100 ಮೀಟರ್ ಎಳೆದೊಯ್ದಿದೆ.
ವ್ಯಕ್ತಿ ಅಂದಾಜು 35ರಿಂದ 40 ವರ್ಷದವರಾಗಿದ್ದು, ಹೆಚ್ಚಿನ ವಿವರಗಳು ತಿಳಿದುಬರಬೇಕಿವೆ. ವಾಹನ ಸ್ಥಳದಿಂದ ಪರಾರಿಯಾಗಿದೆ. ಉಪ್ಪಾರಪೇಟೆ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.