ಬೆಂಗಳೂರು : ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ರಸ್ತೆಯ ಡೈರಿ ಬಳಿ ಅಪರಿಚಿತ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಂದಾಜು ೫೦ ವರ್ಷದ ವ್ಯಕ್ತಿ ಮೃತಪಟ್ಟಿರುತ್ತಾರೆ. ಮೈಕೋ ಲೇಔಟ್ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡು ಮೃತ ವ್ಯಕ್ತಿಯನ್ನು ಪತ್ತೆ ಮಾಡಿ ಮತ್ತು ಅಪಘಾತ ವೆಸಗಿರುವ ವಾಹನವನ್ನು ಪತ್ತೆಹಚ್ಚಲು ರಸ್ತೆಗಳಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ದೂರು ದಾಖಲು ಮಾಡಿಕೊಂಡಿರುತ್ತಾರೆ.
ಮತ್ತೊಂದು ಪ್ರಕರಣ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರ್ಶನ್ ಎಂಬುವರ ಮನೆಯ ಅಪರಿಚಿತ ವ್ಯಕ್ತಿಗಳು ಬೀಗಮುರಿದು ೫ ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡು ಹೋಗಿರುತ್ತಾರೆ.



