ಮೈಸೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸುಬ್ಬರಾಯನ ಕೆರೆಯ ಮಠಕ್ಕೆ ಹಾಗೂ ನಂಜನಗೂಡು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಭಕ್ತಾದಿಗಳಿಗೆ ಆಶೀರ್ವಚನ ನೀಡಿದರು.
ಭೇಟಿ ಬಳಿಕ ಮಾತನಾಡಿದ ಮಂತ್ರಾಲಯದ ಪೂಜ್ಯ ಶ್ರೀ 1008 ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿ ಅವರು ಸುಬ್ಬರಾಯನ ಕೆರೆಯ ಹಾಗೂ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದ 75 ವರ್ಷಗಳು ವಜ್ರ ಮಹೋತ್ಸವ ಆಚರಣೆ ನಿಟ್ಟಿನಲ್ಲಿ ರಾಘವೇಂದ್ರ ಸ್ವಾಮಿಗಳ ವೈಭವದ ಉತ್ಸವ ಆಚರಣೆಗೆ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಪಂಡಿತರೊಂದಿಗೆ ಮೈಸೂರು ಮತ್ತು ನಂಜನಗೂಡಿನಲ್ಲಿ ಒಂದು ದಿನದ ಧಾರ್ಮಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ ಸುಬ್ಬರಾಯನಕೆರೆಯ ಮಠಕ್ಕೆ ಭಕ್ತವಲಯ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.
ಭಕ್ತರ ಅನೂಕೂಲಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಸಹ ಕೈಗೊಳ್ಳಲು ರೂಪು ರೇಷೆ ರೂಪಿಸಲಾಗುತ್ತಿದೆ ಎಂದರು.ಇದೇ ಸಂದರ್ಭದಲ್ಲಿ ಕೆಆರ್ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ಸಹ ಆಶೀರ್ವಾದ ಪಡೆದರು. ನಂತರ ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಮನೆಮನೆಯಲ್ಲೂ ರಾಮ ನಾಮ ಜಪದ ಶತ ಕೋಟಿ ಶ್ರೀ ರಾಮ ತಾರಕ ನಾಮ ಜಪ ಮಹಾ ಯಜ್ಞದ ಪೋಸ್ಟರ್ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ ಉಪಾಧ್ಯಕ್ಷ ಡಿ ಟಿ ಪ್ರಕಾಶ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ನಂ. ಶ್ರೀಕಂಠ ಕುಮಾರ್, ಪುಷ್ಪಾ ಐಯ್ಯಂಗಾರ್, ಉದ್ಯಮಿಗಳಾದ ಜಿ ರವಿ, ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೊಳ ಜಗದೀಶ್, ನಾಗೇಂದ್ರ ಬಾಬು, ಲತಾ ಬಾಲಕೃಷ್ಣ ಸುಚೇಂದ್ರ ಚಕ್ರಪಾಣಿ, ಕಿಶೋರ್, ದೇವಸ್ಥಾನದ ಸಮಿತಿಯ ಸದಸ್ಯರು ಹಾಜರಿದ್ದರು.