ಹನೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆ ವಿಚಾರವಾಗಿ ದಲಿತ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದೂ ರೋಸ್ಟರ್ ಪದ್ಧತಿಯಲ್ಲಿ ಬದಲಾವಣೆ ಮಾಡಿ ಎಲ್ಲರಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದಲ್ಲಿರುವ ಮಹದೇಶ್ವರ ಕ್ರೀಡಾಂಗಣದಿAದ ದಲಿತ ಬಲಗೈ ಹೊಲಯ ಸಮುದಾಯದ ಹನೂರು, ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮದ ಮುಖಂಡರುಗಳು ಮಹಿಳೆಯರು ಯುವಕರು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ತಹಸೀಲ್ದಾರ್ ಕಚೇರಿಯ ತನಕ ಪ್ರತಿಭಟನಾ ಚಳುವಳಿ ನಡೆಸಿ ಒಳಮೀಸಲಾತಿ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಹಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ತಹಸೀಲ್ದಾರ್ ಚೈತ್ರ ಅವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಸುಮಾರು ಮೂರು ಸಾವಿರ ಜನರು ಭಾಗವಹಿಸಿದ್ದು ೩೦ ನಿಮಿಷಗಳ ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು.
ಪ್ರತಿಭಟನೆಯಲ್ಲಿ ಹನೂರು ಪಟ್ಟಣದ ಯಜಮಾನರು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರುಗಳಾದ ಸಂಪತ್ ಕುಮಾರ್,ಸಿದ್ದರಾಜು, ಬಸವರಾಜು, ಮಹೇಶ್, ಮುಖಂಡರಾದ ಕಿರಣ್, ರವೀಂದ್ರ, ಪುಟ್ಟರಾಜು, ಕೃಷ್ಣ,ಸೇರಿದಂತೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಸಿಂಗಾನಲ್ಲೂರು, ದೊಡ್ಡಿಂದುವಾಡಿ, ಮತ್ತಿಪುರ, ತೆಳ್ಳನೂರು, ಹನೂರು ತಾಲೂಕಿನ ಮಣಗಳ್ಳಿ, ಬಂಡಳ್ಳಿ, ಅಜ್ಜಿಪುರ, ಮಾರ್ಟಳ್ಳಿ, ಲೊಕ್ಕನಹಳ್ಳಿ,ಚಿಕ್ಕಮಾಲಾಪುರ, ಪಿ. ಜಿ ಪಾಳ್ಯ, ರಾಮಾಪುರ ವ್ಯಾಪ್ತಿಯ ವಿವಿಧ ಗ್ರಾಮಗಳು ತಾಲೂಕಿನ ವಿವಿಧ ಗ್ರಾಮಗಳು ಮುಖಂಡರುಗಳು ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ದಲಿತ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ



