ಬೆಳಗಾವಿ: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಿಗೆ ಕೊಠಡಿಗಳ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಯು.ಬಿ. ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧುಬಂಗಾರಪ್ಪ, 2020-21ರಿಂದ 2022-23ರ ಸಾಲಿಗೆ ಒಟ್ಟಾರೆಯಾಗಿ 7098 ಶಾಲೆಗಳಿಗೆ 9644 ಕೊಠಡಿಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳಿಗೆ ಒಟ್ಟು 129768.90 ಲಕ್ಷರೂಪಾಯಿಗಳು ನಿಗದಿಯಾಗಿದ್ದು, 9450.139 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಡಾ. ಜಿ.ವೈ.ಪದ್ಮನಾಗರಾಜು