ಸಿಂದಗಿಯ ಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಸೊಲ್ಲಾಪುರದ ಶ್ರೀ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗೆಯ ಶ್ರೀ ಡಾ ಮಲಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಶ್ರೀ ಡಾ ಮಹಾಂತಲಿಂಗ ಶಿವಾಚಾರ್ಯರು, ಶಹಾಪುರದ ಶ್ರೀ ಸೂಗೂರೇಶ್ವರ ಶಿವಾಚಾರ್ಯರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಇಂದು ಭೇಟಿ ಮಾಡಿ ಆಶೀರ್ವದಿಸಿದರು. ಸಚಿವ ಈಶ್ವರ್ ಖಂಡ್ರೆ, ಶಾಸಕ ವಿಜಯಾನಂದ ಕಾಶಪ್ಪನವರ ಉಪಸ್ಥಿತರಿದ್ದರು.



