ರಾಜ್ಯದಲ್ಲಿ ಕೋವಿಡ್-19 ರೋಗವು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚಿಸಲು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೀದ್ ಆಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ ಸುಜಾತಾ ರಾಥೋಡ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ ರವಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.