ಬೆಂಗಳೂರು: ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ೨೦೨೪-೨೫ ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ನಾಳೆ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ೧೦.೩೦ ಕ್ಕೆ ಮಲ್ಲೇಶ್ವರಂ ೮ ನೇ ಕ್ರಾಸ್ ಬಳಿ ಇರುವ ಗಜಲಕ್ಷಿ÷್ಮÃ ಮಹಲ್ ನಲ್ಲಿ ನಡೆಯಲಿರುವ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗಂಗಾಧರ ಮೊದಲಿಯಾರ್ ಅವರು ವಹಿಸಲಿದ್ದಾರೆ. ಸಂಘದ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.