ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಯಾವುದೇ ಮುನ್ಸೂಚನೆ ನೀಡದೆ ದಿಢೀರ್ ಆಗಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ನಾಯಕಿ ಎನಿಸಿಕೊಂಡಿರುವ ಇವರು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕ್ರಿಕೆಟ್ನಿಂದ ಅನಿರ್ದಿಷ್ಟ ವಿರಾಮವನ್ನು ಪಡೆದುಕೊಂಡಿದ್ದರು.
ಆದಾಗ್ಯೂ, ಆಸ್ಟ್ರೇಲಿಯನ್ ಬೋರ್ಡ್ ಇವರು ಸದ್ಯದಲ್ಲೇ ಪುನರಾಗಮನ ಮಾಡಲಿದ್ದಾರೆ ಎಂದು ಹೇಳಿತ್ತು. ಆದರೆ ಲ್ಯಾನಿಂಗ್ 31 ನೇ ವಯಸ್ಸಿನಲ್ಲಿ ಕ್ರಿಕೆಟ್ನಿಂದ ದೂರವಾಗಲು ನಿರ್ಧರಿಸಿದ್ದಾರೆ.ಮೆಗ್ ಲ್ಯಾನಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ವಿಚಾರ ಹೇಳಲು ತುಂಬಾ ಕಷ್ಟವಾಗುತ್ತಿದೆ.
ಆದರೆ, ಇದು ಸರಿಯಾದ ನಿರ್ಧಾರ ಎಂದು ಹೇಳಿದ್ದಾರೆ. “ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಹಿಂದೆ ಸರಿಯುವ ನಿರ್ಧಾರವನ್ನು ಮಾಡುವುದು ಕಷ್ಟಕರವಾಗಿತ್ತು, ಆದರೆ ಇದು ನನಗೆ ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ” ಎಂದು ಲ್ಯಾನಿಂಗ್ ಹೇಳಿಕೊಂಡಿದ್ದಾರೆ.