ಬೆAಗಳೂರು: ರಾಷ್ಟಿçÃಯ ಸ್ವಯಂಸೇವಕ ಸAಘದ ಹಿರಿಯರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೃ. ನರಹರಿ ಅವರು ಇಂದು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಮನಸ್ಸು ತೀವ್ರ ದುಃಖಿತವಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣನವರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬAಧ ಟ್ವಿಟ್ ಮಾಡಿರುವ ಅವರು, ರಾಷ್ಟಿçÃಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟಿçÃಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಇವರು ಸಮಾಜ ಹಾಗೂ ನಾಡಿನ ಒಳಿತಿಗೆ ನೀಡಿದ
ಕೊಡುಗೆ ಅಪ್ರತಿಮವಾದುದು ಹಾಗೂ ನಮ್ಮೆಲ್ಲರಿಗೂ ಪ್ರೇರಣಾದಾಯಕವಾಗಿದೆ ಎಂದಿದ್ದಾರೆ.
ಭಗವAತ ಶ್ರೀಯುತರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಹಾಗೂ ಆಪ್ತವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ