ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಪ್ರತಿ ವಾರ್ಡ್ ನಲ್ಲೂ ಸಹ ಶಾಶ್ವತವಾದ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದೇನೆ. ಜನರ ಕಲ್ಯಾಣಕ್ಕಾಗಿ ದುಡಿಯಲು ಸದಾ ಸಿದ್ಧವಾಗಿದ್ದೇನೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ನಾಗಪುರ ವಾರ್ಡಿನಲ್ಲಿ ಬಿಬಿಎಂಪಿ ವತಿಯಿಂದ ನವೀಕರಿಸಲಾಗಿರುವ ರಾಣಿ ಅಬ್ಬಕ್ಕ ಕ್ರೀಡಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಕ್ಷೇತ್ರದಲ್ಲಿ ಹಲವು ಕ್ರೀಡಾಂಗಣಗಳ ಜೊತೆಗೆ ರಾಣಿ ಅಬ್ಬಕ್ಕ ಕ್ರೀಡಾಂಗಣವನ್ನು ಸಹ ಅಚ್ಚುಕಟ್ಟಾಗಿ ನಿರ್ಮಿಸಬೇಕು ಎಂಬ ಉದ್ದೇಶದಿಂದ ಎಲ್ಲರಿಗೂ ಅನುಕೂಲವಾಗುವಂತಹ ಮಟ್ಟದಲ್ಲಿ ಇಂದು ರಾಣಿ ಅಬ್ಬಕ್ಕ ಕ್ರೀಡಾಂಗಣವನ್ನು ನಿರ್ಮಿಸಿ ಲೋಕಾರ್ಪಣೆ ಗೊಳಿಸಲಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಆಸ್ಪತ್ರೆಗಳು, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ಹೀಗೆ ಹಲವಾರು ಅಭಿವೃದ್ಧಿ ಕೆಲಸ ಮಾಡಲಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಮ್ಮ ಕ್ಷೇತ್ರಕ್ಕೆ ಹಾಗಿದೆ ಎಂದರು.
ಕ್ಷೇತ್ರದ ಜನರಿಗೆ ಅನುಕೂಲವಾಗಬೇಕು ಅವರ ಆರೋಗ್ಯ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಮೂಲ ಉದ್ದೇಶದಿಂದ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಮ್ಮ ಕ್ಲಿನಿಕ್ ಅನ್ನು ಪ್ರಾರಂಭಿಸಿ ಕಾರ್ಯರೂಪಕ್ಕೆ ತರಲಾಗಿದೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಂಡು ಆರೋಗ್ಯವಂತ ಜೀವನ ನಡೆಸಲು ಮುಂದಾಗಿ ಎಂದರು.
ನಮ್ಮ ಕ್ಲಿನಿಕ್ ನಲ್ಲಿ ನೆಗಡಿ, ಜ್ವರ, ಕೆಮ್ಮು, ಇದರೂ ಅವರಿಗೆ ಟ್ಯಾಬ್ಲೆಟ್ ಗಳನ್ನು ನೀಡಲಾಗುತ್ತಿದೆ. ಥೈರಾಯಿಡ್, ಬಿಪಿ, ಶುಗರ್ ಪರೀಕ್ಷೆಯನ್ನು ಮಾಡಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾತ್ರೆಗಳನ್ನು ನೀಡಲಾಗುವುದು ಎಂದರು.
ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಲೋಚನೆಯಂತೆ 2025 ರೊಳಗೆ ಕ್ಷಯ ಮುಕ್ತ ಭಾರತವನ್ನಾಗಿ ನಿರ್ಮಿಸುವ ಕನಸು ಕಟ್ಟಿದ್ದಾರೆ. ಇದಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದರು.
ಕಾರ್ಯಕ್ರಮದಲ್ಲಿ ಎಂ.ಎಲ್.ಸಿ ಆರ್.ದೇವೇಗೌಡ, ಮಾಜಿ ಶಾಸಕರಾದ ನೆ.ಲ ನರೇಂದ್ರ ಬಾಬು, ಮಾಜಿ ಉಪಮುಮೇಯರ್ ಎಸ್.ಹರೀಶ್, ಹೇಮಲತಾ ಗೋಪಾಲಯ್ಯ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಜಂಟಿ ಆಯುಕ್ತರಾದ ಮಂಜು ನಾಥಸ್ವಾಮಿ, ಲೋಕೇಶ್, ಪ್ರಸನ್ನ, ಪದ್ಮಾವತಿ ಶ್ರೀನಿವಾಸ್, ನಾಗರತ್ನಮ್ಮ, ಹಿಂದುಳಿದ ವರ್ಗದ ಅಧ್ಯಕ್ಷರಾದ ನವೀನ್ ಕುಮಾರ್, ವಿನೋದ್, ನಾರಾಯಣ್ ಸ್ವಾಮಿ, ಜಯಸಿಂಹ, ರಘು, ವೆಂಕಟೇಶ್ ಮೂರ್ತಿ, ಹನುಮಂತರಾಯಪ್ಪ, ಬಿಬಿಎಂಪಿ ಇಂಜಿನಿಯರ್ ತಿಮ್ಮರಸು, ಆನಂದ್, ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Leave a Review