ದೊಡ್ಡಬಳ್ಳಾಪುರ: ಸರ್ಕಾರಿ ಜಾಗಗಳ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.ತಾಲ್ಲೂಕಿನ ಮಧುರೆ ಹೋಬಳಿಯ ಕೋಡಿಪಾಳ್ಯ, ಚೆನ್ನಾದೇವಿ ಅಗ್ರಹಾರ ಗ್ರಾಮದಲ್ಲಿ ಸರ್ಕಾರಿ ಜಾಗ, ಕೆರೆ ಒತ್ತುವರಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಹಿಂದೆ ಆಡಳಿತ ನಡೆಸಿದ ಹಲವು ಸರ್ಕಾರಗಳು ಸರ್ಕಾರಿ ಜಾಗ ಸಂರಕ್ಷಣೆಗಾಗಿ ಪ್ರಯತ್ನಿಸಿವೆ. ಆದರೆ, ಪ್ರಗತಿ ಸಮಾಧಾನಕರವಾಗಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಜಾಗ ಸಂರಕ್ಷಣೆಗೆ ಹಲವು ಉಪಕ್ರಮಗಳನ್ನು ತೆಗೆದುಕೊಂಡಿದೆ. ಇದರಲ್ಲಿ ಲ್ಯಾಂಡ್ ಬೀಟ್ ವ್ಯವಸ್ಥೆಯೂ ಒಂದು. ಆರು ತಿಂಗಳ ಹಿಂದೆ ಲ್ಯಾಂಡ್ ಬೀಟ್ ಆಪ್ ಸಿದ್ಧಪಡಿಸಿದ್ದು, ಸರ್ಕಾರಿ ಜಾಗದ ವಿವರ, ಒತ್ತುವರಿ ಮಾಹಿತಿ ಬೆರಳ ತುದಿಯಲ್ಲೇ ಸಿಗಲಿದೆ ಎಂದು ಹೇಳಿದರು.
ಈಗಾಗಲೇ ಆಪ್ನಲ್ಲಿ 14 ಲಕ್ಷ ಸರ್ಕಾರಿ ಜಾಗಗಳನ್ನು ಅಪ್ಲೋಡ್ ಮಾಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಮಹಜರು ನಡೆಸಿ, ಒತ್ತುವರಿಯಾಗಿದ್ದರೆ ಅದರ ವಿವರವನ್ನು ಆಪ್ನಲ್ಲಿ ಹಂಚಿಕೊಳ್ಳಲಿದ್ದಾರೆ. ಇದರ ಆಧಾರ ಮೇಲೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಲಿದ್ದಾರೆ. ಸದ್ಯ ರಾಜ್ಯಾದ್ಯಂತ 5.90 ಲಕ್ಷ ಸ್ಥಳಗಳನ್ನು ಮಹಜರು ಮಾಡಲಾಗಿದೆ ಎಂದು ಹೇಳಿದರು.
ಸರ್ಕಾರಿ ಜಾಗಗಳ ಮಹಜರು ಪ್ರತಿ ಮೂರು ತಿಂಗಳಿಗೊಮ್ಮೆ ಪುನರಾವರ್ತಿತವಾಗಲಿದೆ. ಇದರಿಂದ ಒತ್ತುವರಿ, ಅತಿಕ್ರಮಣ ತಡೆಯಬಹುದಾಗಿದೆ ಎಂದರು.
ಆಧಾರ್- ಖಖಿಅ ಲಿಂಕ್ ವ್ಯವಸ್ಥೆ: ರಾಜ್ಯದಲ್ಲಿ 4.30 ಕೋಟಿ ಜಮೀನು ಮಾಲೀಕರಿದ್ದಾರೆ. ಇತ್ತೀಚೆಗೆ ಯಾರದ್ದೋ ಜಮೀನನ್ನು ಮತ್ಯಾರೋ ನೋಂದಣಿ ಮಾಡಿಸಿಕೊಂಡ ಪ್ರಕರಣಗಳು ಬೆಳಕಿಗೆ ಬಂದಿವೆ. ಖಖಿಅ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಮಾಲಿಕತ್ವಕ್ಕೆ ಖಾತ್ರಿ ಕೊಟ್ಟಂತಾಗುತ್ತದೆ. ಜೊತೆಗೆ ಖಾತೆ, ಪಹಣಿ ವಿತರಣೆಯೂ ಸರಳೀಕರಣವಾಗಲಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು.
ಖಖಿಅ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಒಬ್ಬರ ಜಮೀನನ್ನು ಮತ್ತೊಬ್ಬರು ಲಪಟಾಯಿಸಲು ಆಗುವುದಿಲ್ಲ. ಆಧಾರ್ ಸಂಖ್ಯೆ ಜೋಡಣೆ ಅಭಿಯಾನವನ್ನು ಮಾರ್ಚ್ ತಿಂಗಳಿಂದಲೇ ಆರಂಭಿಸಲಾಗಿದೆ. ಸದ್ಯ 1.40 ಕೋಟಿ ಆಸ್ತಿಗಳು ಲಿಂಕ್ ಆಗಿವೆ. ಇನ್ನು ಮುರ್ನಾಲ್ಕು ತಿಂಗಳಲ್ಲಿ ಎಲ್ಲ ಆಸ್ತಿಗಳ ಜೋಡಣೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಖಖಿಅ- ಆಧಾರದ ಜೋಡಣೆಯಿಂದ ಪವತಿ ಖಾತೆ ಆಗದಿರುವ ಆಸ್ತಿಗಳ ಕುರಿತು ಸಹ ಮಾಹಿತಿ ಸಿಗಲಿದೆ. ಇದರಿಂದ ಆಡಳಿತ ಸರಳೀಕರಣಗೊಂಡು, ವೇಗವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ ಸುತ್ತಲೂ ಗ್ರೀನ್ ಫೆನ್ಸಿಂಗ್ ಹಾಕಬೇಕು. ಗಿಡಗಳನ್ನು ನೆಡಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.