ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನು 10 ದಿನಗಳೊಳಗಾಗಿ ಈಡೇರಿಸುವ ಮೂಲಕ ಜನರಿಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡುವ ಮೂಲಕ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲೂ ಕಾಂಗ್ರೆಸ್ ಪಕ್ಷ ಜಯ ಸಾಧಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಗರದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿರುವ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಮುಖಂಡರ ಕಾರ್ಯಕರ್ತರ ಸಭೆಯಲ್ಲ ಮಾತನಾಡಿದರು.ದೇಶದಲ್ಲಿ ಭಾಗ್ಯಗಳನ್ನು ನೀಡಿದ ಮೊದಲ
ರಾಜ್ಯ ಕರ್ನಾಟಕದ ಕಾಂಗ್ರೆಸ್ ಸರಕಾರವಾಗಿದ್ದುರಾಜ್ಯದ 4.5 ಕೋಟಿ ಜನರಿಗೆ ಸರಕಾರದ ಗ್ಯಾರಂಟಿ ಭಾಗ್ಯಗಳು ತಲುಪಿದೆ, ಇದರಿಂದ ಮಹಿಳೆಯರಿಗೆ ಅತಿ ಹೆಚ್ಚು ಪ್ರಯೋಜನವಾಇಂತಹ ಪ್ರಚಾರ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಸೇರಿಸಬೇಕು.
ಕ್ಷೇತ್ರದ ಯುವ ಮುಖಂಡರನ್ನು ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಶಾಸಕ ಹಾಗೂ ಕಿಯೋನಿಕ್ಸ್ ಸಂಸ್ಥೆಯಅಧ್ಯಕ್ಷ ಶರತ್ ಬಚ್ಚೇಗೌಡ ಮಾತನಾಡಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರಂಟಿ ಯೋಜನೆಯ ಯಶಸ್ವಿಯಾಗಿ ಪ್ರತಿಯೊಬ್ಬ ಬಡವರ ಮನೆ ಮನೆಗೆ ತಲುಪಿಸುವ ಕಾರ್ಯವಾಗಿದೆ,
ಕೇಂದ್ರದಲ್ಲಿ ಬಿಜೆಪಿ ಗೆದ್ದರೆ ದಿನಬಳಕೆಯ ವಸ್ತುಗಳು ಗಗನಕ್ಕೇರುವ ಪರಿಸ್ಥಿತಿ ಉಂಟಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನಪರ ಆಡಳಿತ ಸಾದ್ಯ ಎಂದರು, ಚುನಾವಣೆ ನಂತರ ತಾಲೂಕಿನ ನಂದಗುಡಿ ಹೋಬಳಿಯ ಬಾಗದ 49 ಕೆರೆಗಳಿಗೆ ನೀರು ಹಾಯಿಸುವ 150 ಕೋಟಿ ರೂ. ಯೋಜನೆ ಜಾರಿಗೊಳಿಸುವುದಾಗಿ ಆಶ್ವಾಸನೆ ನೀಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮಾತನಾಡಿ ಕೇಂದ್ರ, ರಾಜ್ಯ ಹಾಗೂ ಕ್ಷೇತ್ರದ ಮುಖಂಡರು ಒಮ್ಮತದಿಂದ ನನ್ನನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು ಎಲ್ಲರ ವಿಶ್ವಾಸವನ್ನು ಉಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲಾಗುವುದು. ಮತದಾರರ ಸೇವೆ ಮಾಡಲು ಒಂದು ಅವಕಾಶ ಮಾಡಿಕೊಡಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಶಾಮಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್. ಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಕೇಶವಮೂರ್ತಿ, ಸದಸ್ಯರಾದ ಎಚ್.ಎಂ.ಸುಬ್ಬರಾಜು, ಶಿವಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಚ್.ಜೆ.ಬಚ್ಚೇಗೌಡ, ಸಗೀರ್ ಅಹಮದ್, ಮರಿಯಪ್ಪ, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೇಮಲತಾ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೋಡಿಹಳ್ಳಿಸುರೇಶ್, ಕೆಪಿಸಿಸಿ ಸದಸ್ಯ ಇಟ್ಟಸಂದ್ರ ಗೋಪಾಲ್,ಮುಖಂದರಾದ ನಾರಾಯಣಗೌಡ ಇನ್ನಿತರರು ಭಾಗವಹಿಸಿದ್ದರು.