ಬೆಂಗಳೂರು: ಬೆಂಗಳೂರು ರಾಜ್ಯದಲ್ಲಿ ದಲಿತರು ಸಿಎಂ ಆಗಬೇಕು ಎಂಬ ಕೂಗು ಎಬ್ಬರಿಸಿರುವುದು ವಿಪಕ್ಷಗಳೇ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷಗಳು ತಮ್ಮ ಉಳುಕು ಮುಚ್ಚಿಕೊಳ್ಳಲು ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಆರೋಪ ಮಾಡಿದ್ದಾರೆ.
ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಇಲ್ಲವಾ? ಆಡಳಿತ ನಡೆಸುತ್ತಿಲ್ಲವಾ? ಎಂದಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಯುತ್ತಿದೆಯಲ್ಲಾ ಎಂದಿದ್ದಾರೆ. ದಲಿತರನ್ನು ಮುಖ್ಯಮಂತ್ರಿ ಮಾಡುವುದು ಎಂದಿದ್ದರೂ ಕಾಂಗ್ರೆಸ್ ಪಕ್ಷವೇ. ಸಮಯ ಬಂದಾಗ ದಲಿತರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಎಂದಿದ್ದರೂ ಜನಸಾಮಾನ್ಯರ ಪಕ್ಷವೇ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ರಂಜಾನ್ ಹಾಗೂ ಹೋಳಿ ಹಬ್ಬ ಶಾಂತಿಯುತವಾಗಿ ಜನರು ಆಚರಿಸಲು ಯಾವುದೇ ಅಹಿತಕರ ಘಟನೆ ನಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ದರಾಗಿದ್ದಾರೆ. ಅದಕ್ಕೆ ಬದ್ದರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಸಮರಕ್ಕೆ ಸಂಬಂಧಪಟ್ಟಂತೆ ಉತ್ತರಿಸಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಅವರು ಜನತಾದಳದಲ್ಲಿದ್ದವರು. ಆಗ ಕುಮಾರಸ್ವಾಮಿ ಸಿದ್ದರಾಮಯ್ಯ ನಡುವೆ ಏನೇನು ನಡೆದಿರುತ್ತದೆ ಎಂಬುದು ನಮಗೆ ತಿಳಿದಿದ್ದೆಯೇ ಅದಕ್ಕೆಲ್ಲಾ ಉತ್ತರಿಸಲಾಗುತ್ತದೆಯೇ ಎಂದರು.
ವಿಪಕ್ಷಗಳ ಹುನ್ನಾರ ದಲಿತ ಸಿಎಂ ಕೂಗಿನ ಬಗ್ಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯೆ



