ಬೆಂಗಳೂರು: ಸಚಿವ ಹುದ್ದೆ ಬಯಸಿ ವರಿಷ್ಠರ ಮೇಲೆ ಪ್ರಭಾವ ಬೀರಲು ದೆಹಲಿಗೆ ತೆರಳಿದ್ದ ಶಾಸಕರು ಇಂದು ಬೆಳಿಗ್ಗೆ ದೆಹಲಿಯಿಂದ ವಾಪಸ್ ಆಗಿದ್ದಾರೆ.
ಬಹಳ ದಿನಗಳಿಂದ ವರಿಷ್ಠರ ಮನವೊಲಿಸಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಶಾಸಕರು ಯಾವುದೇ ಸಚಿವರ ಬಗ್ಗೆ ನಿರ್ಧಾರವಾಗದ ಕಾರಣ ಇಂದು ಬೆಂಗಳೂರಿಗೆ ಮರಳಿದ್ದಾರೆ. ನಿನ್ನೆ ರಾತ್ರಿ ದೆಹಲಿಯಲ್ಲಿ ಪಕ್ಷದ ವರಿಷ್ಠರಾದ ರಾಹುಲ್ಗಾಂಧಿ ಮಲ್ಲಿಕಾರ್ಜುನ ಖರ್ಗೆ, ಕೆ.ಸಿವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಅವರು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸಭೆ ನಡೆಸಿ ಎಲ್ಲರೂ ನೀಡಿದ ಪಟ್ಟಿಯನ್ನು ಪಡೆದುಕೊಂಡು ಸಮಾಲೋಚನೆ ನಡೆಸಿದ್ದಾರೆ. ಬಹುತೇಕ ಆ.3ರ ಸೋಮವಾರ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ. ಭಾನುವಾರದ ವೇಳೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರಾದ ಕೆ.ಸಿವೇಣುಗೋಪಾಲ್ ಅವರು ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಸೇರಿದಂತೆ ದೆಹಲಿಗೆ ತೆರಳಿದ್ದ ಎಲ್ಲರೂ ಬರಿಗೈಯಲ್ಲಿ ಹಿಂತಿರುಗಿದ್ದಾರೆ.
ದೆಹಲಿಯಿಂದ ಮರಳಿದ ಸಚಿವಾಕಾಂಕ್ಷಿಗಳು



