ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಪೂರ್ವ ಸಿದ್ಧತಾ ಸಭೆ ನಡೆಸಿವೆ. ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಲೋಕಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಉಸ್ತುವಾರಿಗಳಾಗಿರುವ ಸಚಿವರುಗಳು ಪಕ್ಷದ ವರಿಷ್ಠರ ಸೂಚನೆಯಂತೆ ದೆಹಲಿಗೆ ತೆರಳಿದ್ದಾರೆ.
28 ಸಚಿವರು ದೆಹಲಿಗೆ ತೆರಳಿದ್ದು, ಮಧ್ಯಾಹ್ನ 3 ಗಂಟೆಗೆ ವರಿಷ್ಠರ ಸಮ್ಮುಖದಲ್ಲಿ ನಡೆಯಲಿರುವ ಅಭಿಪ್ರಾಯ ಸಂಗ್ರಹಣ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ತಿಳಿಸ ಲಿದ್ದಾರೆ.ಇತ್ತ ಬೆಂಗಳೂರಿನಿಂದ ನಿನ್ನೆಯಿಂದ ಬಿಜೆಪಿ ವತಿಯಿಂದ ನಡೆಯುತ್ತಿರುವ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಣಾ ಸಭೆ ಮುಂದುವರಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದಾರೆ. ಕ್ಷೇತ್ರವಾರು ಮುಖಂಡರ ಅಭಿಪ್ರಾಯವನ್ನು ಸಭೆಯಲ್ಲಿ ಸಂಗ್ರಹ ಮಾಡಲಾಗುತ್ತಿದೆ.